< Римљанима 12 >

1 Молим вас, дакле, браћо, милости Божије ради, да дате телеса своја у жртву живу, свету, угодну Богу; то да буде ваше духовно богомољство.
ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
2 И не владајте се према овоме веку, него се промените обновљењем ума свог, да бисте могли кушати које је добра и угодна и савршена воља Божија. (aiōn g165)
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. (aiōn g165)
3 Јер кроз благодат која је мени дата кажем свакоме који је међу вама да не мислите за себе више него што ваља мислити; него да мислите у смерности као што је коме Бог уделио меру вере.
ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
4 Јер као у једном телу што имамо многе уде а уди сви немају један посао,
ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ
5 Тако смо многи једно тело у Христу, а по себи смо уди један другом.
ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.
6 А имамо различите дарове по благодати која нам је дана: ако пророштво, нека буде по мери вере;
ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
7 Ако ли службу, нека служи; ако је учитељ, нека учи;
ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.
8 Ако је тешитељ, нека теши; који даје нека даје просто; који управља нека се брине; који чини милост нека чини с добром вољом.
ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.
9 Љубав да не буде лажна. Мрзећи на зло држите се добра.
ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.
10 Братском љубави будите један к другом љубазни. Чашћу један другог већег чините.
೧೦ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
11 Не будите у послу лени; будите огњени у духу, служите Господу.
೧೧ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.
12 Надањем веселите се, у невољи трпите, у молитви будите једнако.
೧೨ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
13 Делите потребе са светима; примајте радо путнике.
೧೩ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
14 Благосиљајте оне који вас гоне: благосиљајте, а не куните.
೧೪ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.
15 Радујте се с радоснима, и плачите с плачнима.
೧೫ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
16 Будите једне мисли међу собом. Не мислите о високим стварима, него се држите ниских. Не мислите за себе да сте мудри.
೧೬ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.
17 А никоме не враћајте зла за зло; промишљајте о томе шта је добро пред свим људима.
೧೭ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.
18 Ако је могуће, колико до вас стоји, имајте мир са свим људима.
೧೮ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.
19 Не освећујте се за себе, љубазни, него подајте место гневу, јер стоји написано: Моја је освета, ја ћу вратити, говори Господ.
೧೯ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
20 Ако је, дакле, гладан непријатељ твој, нахрани га; ако је жедан, напој га; јер чинећи то угљевље огњено скупљаш на главу његову.
೨೦ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.
21 Не дај се злу надвладати, него надвладај зло добрим.
೨೧ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.

< Римљанима 12 >