< Римљанима 13 >

1 Свака душа да се покорава властима које владају; јер нема власти да није од Бога, а што су власти, од Бога су постављене.
ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.
2 Тако који се супроти власти супроти се наредби Божијој; а који се супроте примиће грех на себе.
ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು.
3 Јер кнезови нису страх добрим делима него злим. Хоћеш ли, пак, да се не бојиш власти, чини добро, и имаћеш хвалу од ње;
ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು.
4 Јер је слуга Божји теби за добро. Ако ли зло чиниш, бој се; јер узалуд не носи мача, јер је Божји слуга, осветник на гнев ономе који зло чини.
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.
5 Тако се ваља покоравати не само од страха него и по савести.
ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು.
6 Јер за то и порезе дајете; јер су слуге Божије које су за то исто постављене.
ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.
7 Подајте, дакле, свакоме шта сте дужни: коме дакле порезу, порезу; а коме царину, царину; а коме страх, страх; а коме част, част.
ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
8 И не будите никоме ништа дужни осим да љубите један другог; јер који љуби другог закон испуни.
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
9 Јер ово: Не чини прељубе, не убиј, не укради, не сведочи лажно, не зажели, и ако има још каква друга заповест, у овој се речи извршује, то јест: Љуби ближњег свог као самог себе.
ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
10 Љубав не чини зла ближњему; дакле је љубав извршење закона.
೧೦ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.
11 И знајући ово време да је већ час дошао да устанемо од сна; јар нам је сад ближе спасење него ли кад веровасмо.
೧೧ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.
12 Ноћ прође, а дан се приближи: да одбацимо, дакле, сва дела тамна, и да се обучемо у оружје видела.
೧೨ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.
13 Да ходимо поштено као по дану: не у ждерању и пијанству, не у курварству и нечистоти, не у свађању и зависти;
೧೩ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
14 Него се обуците у Господа Исуса Христа; и телу не угађајте по жељама.
೧೪ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

< Римљанима 13 >