< Первое послание к Коринфянам 14 >

1 Держитеся любве: ревнуйте же духовным, паче же да пророчествуете.
ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.
2 Глаголяй бо языки, не человеком глаголет, но Богу: никтоже бо слышит, духом же глаголет тайны:
ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಆತ್ಮ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.
3 пророчествуяй же, человеком глаголет созидание и утешение и утверждение.
ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು.
4 Глаголяй (бо) языки себе зиждет, а пророчествуяй церковь зиждет.
ಅನ್ಯಭಾಷೆಗಳನ್ನಾಡುವವನು ತನಗೆ ತಾನೇ ಆತ್ಮೀಕ ವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ, ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡುತ್ತಾನೆ.
5 Хощу же всех вас глаголати языки, паче же да прорицаете: болий бо пророчествуяй, нежели глаголяй языки, разве аще (кто) сказует, да церковь созидание приемлет.
ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬುದೆ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಆ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು.
6 Ныне же, братие, аще прииду к вам языки глаголя, кую вам пользу сотворю, аще вам не глаголю или во откровении, или в разуме, или в пророчествии, или в научении?
ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?
7 Обаче бездушная глас дающая, аще сопель, аще гусли, аще разнствия писканием не дадят, како разумно будет пискание или гудение?
ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದಗಳಲ್ಲಿ ಯಾವ ವ್ಯತ್ಯಾಸವನ್ನೂ ತೋರಿಸದಿದ್ದರೆ; ನುಡಿಸಿದ ವಾದ್ಯ ಇಂಥದ್ದೇ ಎಂದು ಹೇಗೆ ತಿಳಿಯುವುದು?
8 Ибо аще безвестен глас труба даст, кто уготовится на брань?
ತುತ್ತೂರಿಯು ಅಸ್ಪಷ್ಟ ಶಬ್ದವನ್ನು ಮೊಳಗಿಸಿದರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು?
9 Тако и вы аще не благоразумно слово дадите языком, како уразумеется глаголемое? Будете бо на воздух глаголюще.
ಹಾಗೆಯೇ ನೀವೂ ಸಹ ಸ್ಪಷ್ಟವಾದ ಭಾಷೆಯನ್ನು ನಿಮ್ಮ ಬಾಯಿಂದ ಮಾತನಾಡದೆ ಹೋದರೆ, ನಿಮ್ಮ ಮಾತಿನ ಅರ್ಥವನ್ನು ಹೇಗೆ ತಿಳಿದುಕೊಳ್ಳಲು ಸಾಧ್ಯ? ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ.
10 Толицы убо, аще ключится, роди гласов суть в мире, и ни един их безгласен.
೧೦ಲೋಕದಲ್ಲಿ ಅನೇಕ ಭಾಷೆಗಳಿವೆ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದವುಗಳಿಲ್ಲ.
11 Аще убо не увем силы гласа, буду глаголющему иноязычник, и глаголющий мне иноязычник.
೧೧ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತನಾಡುವವನಿಗೆ ನಾನು ಪರದೇಶದವನಂತಿರುವೆನು; ಮಾತನಾಡುವವನು ನನಗೆ ಪರದೇಶಿಯವನಂತಿರುತ್ತಾನೆ.
12 Тако и вы, понеже ревнителе есте духовом, (яже) к созиданию церкве просите, да избыточествуете.
೧೨ಹಾಗೆಯೇ ನೀವು ಆತ್ಮೀಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ.
13 Темже глаголяй языком да молится, да сказует.
೧೩ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಲಿ.
14 Аще бо молюся языком, дух мой молится, а ум мой без плода есть.
೧೪ಯಾಕೆಂದರೆ ನಾನು ಅನ್ಯಭಾಷೆಯಲ್ಲಿ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುತ್ತಿರುತ್ತದೆ. ಆದರೆ ನನ್ನ ಬುದ್ಧಿಯು ನಿಷ್ಫಲವಾಗಿರುವುದು.
15 Что убо есть? Помолюся духом, помолюся же и умом: воспою духом, воспою же и умом.
೧೫ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.
16 Понеже аще благословиши духом, исполняяй место невежды како речет аминь, по твоему благодарению? Понеже не весть, что глаголеши.
೧೬ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ?
17 Ты убо добре благодариши, но другий не созидается.
೧೭ನೀನು ಎಷ್ಟು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡಿದರೂ, ಆದರಿಂದ ಬೇರೊಬ್ಬನು ಭಕ್ತಿವೃದ್ಧಿಹೊಂದುವುದಿಲ್ಲ.
18 Благодарю Бога моего, паче всех вас языки глаголя:
೧೮ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರನ್ನು ಕೊಂಡಾಡುತ್ತೇನೆ.
19 но в церкви хощу пять словес умом моим глаголати, да и ины пользую, нежели тмы словес языком.
೧೯ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ.
20 Братие, не дети бывайте умы: но злобою младенствуйте, умы же совершени бывайте.
೨೦ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.
21 В законе пишет: яко иными языки и устны иными возглаголю людем сим, и ни тако послушают Мене, глаголет Господь.
೨೧“ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ.
22 Темже языцы в знамение суть не верующым, но неверным: а пророчество не неверным, но верующым.
೨೨ಆದ್ದರಿಂದ ಅನ್ಯಭಾಷೆಗಳನ್ನಾಡುವುದು ಯೇಸುವನ್ನು ನಂಬದವರಿಗೆ ಸೂಚನೆಯಾಗಿದೆಯೇ ಹೊರತು ಯೇಸುವನ್ನು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳಿದುಕೊಳ್ಳಬೇಕು. ಆದರೆ ಪ್ರವಾದನೆಯು ಯೇಸುವನ್ನು ನಂಬದವರಿಗಾಗಿಯಲ್ಲ ನಂಬುವವರಿಗಾಗಿಯೇ ಇದೆ.
23 Аще убо снидется церковь вся вкупе, и вси языки глаголют, внидут же (и) неразумивии или невернии, не рекут ли, яко беснуетеся?
೨೩ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?
24 Аще же вси пророчествуют, внидет же некий неверен или невежда, обличается всеми, (и) истязуется от всех,
೨೪ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,
25 и сице тайная сердца его явлена бывают: и тако пад ниц поклонится Богови, возвещая, яко воистинну Бог с вами есть.
೨೫ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.
26 Что убо есть, братие? Егда сходитеся, кийждо вас псалом имать, учение имать, язык имать откровение имать, сказание имать: вся (же) к созиданию да бывают.
೨೬ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.
27 Аще языком кто глаголет, по двема, или множае по трием, и по части: и един да сказует.
೨೭ಅನ್ಯಭಾಷೆಗಳನ್ನಾಡುವುದಾದರೆ ಇಬ್ಬರು ಅಥವಾ ಅವಶ್ಯವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು;
28 Аще ли не будет сказатель, да молчит в церкви, себе же да глаголет и Богови.
೨೮ಮತ್ತು ಒಬ್ಬನು ಅದರ ಅರ್ಥವನ್ನು ಹೇಳಬೇಕು. ಅರ್ಥವನ್ನು ಹೇಳುವವನಿಲ್ಲದಿದ್ದರೆ ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಸುಮ್ಮನಿರಲಿ; ತನ್ನೊಂದಿಗೂ ಮತ್ತು ದೇವರೊಂದಿಗೂ ಮಾತನಾಡಿಕೊಳ್ಳಲಿ.
29 Пророцы же два или трие да глаголют, и друзии да разсуждают:
೨೯ಇಬ್ಬರು ಮೂವರು ಪ್ರವಾದಿಗಳು ಮಾತನಾಡಲಿ, ಮಿಕ್ಕಾದವರು ವಿವೇಚನೆಯಿಂದ ಕೇಳಲಿ.
30 аще ли иному открыется седящу, первый да молчит.
೩೦ಕುಳಿತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ
31 Можете бо вси по единому пророчествовати, да вси учатся и вси утешаются.
೩೧ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು.
32 И дуси пророчестии пророком повинуются:
೩೨ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿರುತ್ತವೆ.
33 несть бо нестроения Бог, но мира, яко во всех церквах святых.
೩೩ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.
34 Жены вашя в церквах да молчат: не повелеся бо им глаголати, но повиноватися, якоже и закон глаголет.
೩೪ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ.
35 Аще ли чесому научитися хотят, в дому своих мужей да вопрошают: срамно бо есть жене в церкви глаголати.
೩೫ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು.
36 Или от вас слово Божие изыде? Или вас единых достиже?
೩೬ದೇವರ ವಾಕ್ಯವು ನಿಮ್ಮಿಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂದಿತೋ?
37 Аще кто мнится пророк быти или духовен, да разумеет, яже пишу вам, зане Господни суть заповеди?
೩೭ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.
38 Аще ли кто не разумеет, да не разумевает.
೩೮ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗುರುತಿಲ್ಲದವನಂತೆ ಇರಲಿ.
39 Темже, братие моя, ревнуйте еже пророчествовати, и еже глаголати языки не возбраняйте:
೩೯ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ.
40 вся же благообразно и по чину да бывают.
೪೦ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.

< Первое послание к Коринфянам 14 >