< Псалтирь 29 >

1 Принесите Господеви, сынове Божии, принесите Господеви сыны овни, принесите Господеви славу и честь:
ದಾವೀದನ ಕೀರ್ತನೆ. ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.
2 принесите Господеви славу имени Его: поклонитеся Господеви во дворе святем Его.
ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.
3 Глас Господень на водах, Бог славы возгреме, Господь на водах многих.
ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.
4 Глас Господень в крепости, глас Господень в великолепии.
ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.
5 Глас Господа, сокрушающаго кедры: и стрыет Господь кедры Ливанския,
ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.
6 и истнит я яко телца Ливанска: и возлюбленный яко сын единорожь.
ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.
7 Глас Господа, пресецающаго пламень огня.
ಯೆಹೋವನ ಗರ್ಜನೆಗೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.
8 Глас Господа, стрясающаго пустыню: и стрясет Господь пустыню Каддийскую.
ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ.
9 Глас Господень, свершающий елени, и открыет дубравы: и в храме Его всякий глаголет славу.
ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ.
10 Господь потоп населяет, и сядет Господь царь в век.
೧೦ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.
11 Господь крепость людем Своим даст, Господь благословит люди Своя миром.
೧೧ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.

< Псалтирь 29 >