< Éxodo 21 >

1 Y estos son los derechos que les propondrás:
“ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ;
2 Si comprares siervo Hebreo, seis años servirá; mas al séptimo saldrá horro de balde.
“‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.
3 Si entró solo, solo saldrá: si era marido de mujer, saldrá él y su mujer con él.
ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು.
4 Si su amo le hubiere dado mujer, y ella le hubiere parido hijos o hijas, la mujer y sus hijos serán de su amo, mas él saldrá solo.
ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.’”
5 Y si el siervo dijere: Yo amo a mi señor, a mi mujer, y a mis hijos, no saldré horro:
ಆದರೆ ದಾಸನು, “ನಾನು ನನ್ನ ಯಜಮಾನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಆದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರೆ,
6 Entonces su amo lo hará llegar a los jueces, y hacerlo ha llegar a la puerta, o al poste; y su amo le horadará la oreja con una lesna, y será su siervo para siempre.
ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.
7 Y cuando alguno vendiere su hija por sierva, no saldrá como suelen salir los siervos.
ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.
8 Si no agradare a su señor, por lo cual no la tomó por esposa, permitirle ha que se rescate; y no la podrá vender a pueblo extraño cuando la desechare.
ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.
9 Mas si la hubiere desposado con su hijo, hará con ella según la costumbre de las hijas.
ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿಕೊಂಡರೆ ಮಗಳಂತೆ ಆಕೆಯನ್ನು ನೋಡಿಕೊಳ್ಳಬೇಕು.
10 Si le tomare otra, no disminuirá su alimento, ni su vestido, ni su tiempo.
೧೦ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು.
11 Y si ninguna de estas tres cosas hiciere, ella saldrá de gracia sin dinero.
೧೧ಈ ಮೂರರಲ್ಲಿ ಯಾವುದನ್ನೂ ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.
12 El que hiriere a alguno, y muriere, él morirá.
೧೨ಮನುಷ್ಯನನ್ನು ಹೊಡೆದು ಕೊಂದವನು ಖಂಡಿತವಾಗಿ ಸಾಯಬೇಕು.
13 Mas el que no asechó, sino que Dios lo puso en sus manos, entonces yo te pondré lugar al cual huirá.
೧೩ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.
14 Ítem, si alguno se ensoberbeciere contra su prójimo, y le matare por engaño, de mi altar le quitarás para que muera.
೧೪ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.
15 Ítem, el que hiriere a su padre, o a su madre, morirá.
೧೫ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು.
16 Ítem, el que hurtare alguno, y le vendiere, y fuere hallado en sus manos, morirá.
೧೬ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.
17 Ítem, el que maldijere a su padre, o a su madre, morirá.
೧೭ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.
18 Ítem, si algunos riñeren, y alguno hiriere a su prójimo con piedra o con el puño, y no muriere, mas cayere en cama;
೧೮ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು,
19 Si se levantare y anduviere fuera sobre su bordón, entonces el que le hirió, será absuelto; solamente le dará lo que holgó, y hacerle ha curar.
೧೯ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.
20 Ítem, si alguno hiriere a su siervo o a su sierva, con palo, y muriere debajo de su mano, será castigado:
೨೦ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಹೊಡೆದರೆ, ಅವನಿಗೆ ತಕ್ಕ ಶಿಕ್ಷೆಯಾಗಬೇಕು.
21 Mas si durare por un día o dos, no será castigado, porque su dinero es.
೨೧ಆ ದಾಸನು ಆಗಲೇ ಸಾಯದೆ ಒಂದೆರಡು ದಿನ ಬದುಕಿದ್ದರೆ, ಯಜಮಾನನಿಗೆ ಶಿಕ್ಷೆಯನ್ನು ವಿಧಿಸಕೂಡದು. ಏಕೆಂದರೆ ಆ ದಾಸನು ಅವನ ಸೊತ್ತಾಗಿದ್ದಾನೆ.
22 Ítem, si algunos riñeren, e hirieren a alguna mujer preñada, y salieren sus criaturas, mas no hubiere muerte, será penado conforme a lo que impusiere el marido de la mujer, y pagará por jueces.
೨೨ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.
23 Mas si hubiere muerte, entonces pagarás alma por alma.
೨೩ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು.
24 Ojo por ojo, diente por diente, mano por mano, pie por pie,
೨೪ಕಣ್ಣಿಗೆ ಕಣ್ಣನ್ನು, ಹಲ್ಲಿಗೆ ಹಲ್ಲನ್ನು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,
25 Quemadura por quemadura, herida por herida, golpe por golpe,
೨೫ಬರೆಗೆ ಬರೆಯನ್ನು, ಗಾಯಕ್ಕೆ ಗಾಯವನ್ನು, ಏಟಿಗೆ ಏಟನ್ನು ಪ್ರತಿಯಾಗಿ ಕೊಡಬೇಕು.
26 Ítem, cuando alguno hiriere el ojo de su siervo, o el ojo de su sierva, y le dañare, por su ojo le ahorrará.
೨೬ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು.
27 Y si sacare el diente de su siervo, o el diente de su sierva, por su diente le ahorrará.
೨೭ಒಬ್ಬನು ದಾಸನ ಅಥವಾ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೆ ಈಡಾಗಿ ಅವರನ್ನು ಬಿಡುಗಡೆಮಾಡಿ ಕಳುಹಿಸಬೇಕು.
28 Ítem, si algún buey acorneare hombre o mujer, y muriere, el buey será apedreado, y su carne no será comida, mas el dueño del buey será absuelto:
೨೮ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
29 Mas si el buey era acorneador desde ayer y anteayer, y a su dueño le fue hecho requerimiento, y no lo hubiere guardado, y matare hombre o mujer, el buey será apedreado, y también su dueño morirá:
೨೯ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.
30 Si le fuere impuesto rescate, entonces dará por el rescate de su persona cuanto le fuere impuesto.
೩೦ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಿ.
31 Haya acorneado hijo, o haya acorneado hija, conforme a este juicio se hará con él.
೩೧ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
32 Si el buey acorneare siervo, o sierva, pagará treinta siclos de plata a su señor, y el buey será apedreado.
೩೨ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
33 Ítem, si alguno abriere alguna cisterna, o cavare cisterna, y no la cubriere, y cayere allí buey o asno,
೩೩ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ,
34 El dueño de la cisterna pagará el dinero restituyendo a su dueño; y lo que fue muerto será suyo.
೩೪ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
35 Ítem, si el buey de alguno hiriere al buey de su prójimo, y muriere, entonces venderán el buey vivo, y partirán el dinero de él; y el muerto también partirán.
೩೫ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನೂ ಇಬ್ಬರೂ ಸಮವಾಗಿ ಹಂಚಿಕೊಳ್ಳಬೇಕು.
36 Mas si era notorio que el buey era acorneador de ayer y anteayer, y su dueño no lo hubiere guardado, pagará buey por buey, y el muerto será suyo.
೩೬ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.

< Éxodo 21 >