< Números 29 >

1 Ítem, el séptimo mes, al primero del mes, tendréis santa convocación, ninguna obra servil haréis, día de jubilación os será.
“‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
2 Y haréis en holocausto por olor de holganza a Jehová un becerro hijo de vaca, un carnero, siete corderos perfectos de un año:
ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.
3 Y el presente de ellos, flor de harina amasada con aceite, tres diezmas con cada becerro, dos diezmas con cada carnero:
ಧಾನ್ಯನೈವೇದ್ಯಕ್ಕಾಗಿ ಆ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಎಣ್ಣೆ ಬೆರೆಸಿದ ಆರು ಸೇರು ಹಿಟ್ಟನ್ನು,
4 Y con cada uno de los siete corderos una diezma:
ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಮೂರು ಸೇರು ಎಣ್ಣೆ ಬೆರಸಿದ ಹಿಟ್ಟನ್ನು,
5 Y un macho de cabrío por expiación para reconciliaros:
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.
6 Allende del holocausto del mes y su presente, y el holocausto continuo y su presente, y sus derramaduras conforme a su ley, ofrenda encendida a Jehová en olor de holganza.
ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.
7 Ítem, a los diez de este mes séptimo tendréis santa convocación, y afligiréis vuestras almas, ninguna obra haréis:
“‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆಗಾಗಿ ಸಭೆಕೂಡಬೇಕು.
8 Y ofreceréis en holocausto a Jehová por olor de holganza un becerro hijo de vaca, un carnero, siete corderos de un año, sin tacha los tomaréis.
ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.
9 Y sus presentes, flor de harina amasada con aceite, tres diezmas con cada becerro: dos diezmas con cada carnero:
ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಆರು ಸೇರು ಎಣ್ಣೆ ಬೆರೆಸಿದ ಹಿಟ್ಟನ್ನು,
10 Y con cada uno de los siete corderos una diezma:
೧೦ಏಳು ಕುರಿಗಳಲ್ಲಿ ಒಂದೊಂದಕ್ಕೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು,
11 Un macho de cabrío por expiación, allende de la ofrenda de las expiaciones por el pecado, y del holocausto continuo y de sus presentes, y de sus derramaduras.
೧೧ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
12 Ítem, a los quince días del mes séptimo, tendréis santa convocación: ninguna obra servil haréis, y celebraréis solemnidad a Jehová por siete días:
೧೨“‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.
13 Y ofreceréis en holocausto, en ofrenda encendida a Jehová en olor de holganza trece becerros hijos de vaca, dos carneros, catorce corderos de un año, serán sin defecto:
೧೩ಆ ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಟಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ,
14 Y los presentes de ellos, flor de harina amasada con aceite, tres diezmas con cada uno de los trece becerros, dos carneros, catorce corderos de un año, serán perfectos:
೧೪ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಎಣ್ಣೆ ಬೆರಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು,
15 Y con cada uno de los catorce corderos una diezma:
೧೫ಹದಿನಾಲ್ಕು ಕುರಿಮರಿಗಳಿಗೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನೂ ಸಮರ್ಪಿಸಬೇಕು.
16 Y un macho cabrío por expiación, allende del holocausto continuo, su presente, y su derramadura.
೧೬ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು.
17 Y el segundo día, doce becerros hijos de vaca, dos carneros, catorce corderos sin tacha de un año:
೧೭“‘ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು.
18 Y sus presentes, y sus derramaduras con los becerros, con los carneros, y con los corderos según el número de ellos conforme a la ley:
೧೮ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ,
19 Y un macho de cabrío por expiación, allende del holocausto continuo, y su presente y su derramadura.
೧೯ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ನಿತ್ಯ ಸರ್ವಾಂಗಹೋಮಕ್ಕಾಗಿ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
20 Y el tercero día, once becerros, dos carneros, catorce corderos sin defecto de un año:
೨೦“‘ಮೂರನೆಯ ದಿನದಲ್ಲಿ ದೋಷವಿಲ್ಲದ ಹನ್ನೊಂದು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ,
21 Y sus presentes y sus derramaduras con los becerros, con los carneros, y con los corderos según el número de ellos conforme a la ley:
೨೧ನೈವೇದ್ಯಕ್ಕಾಗಿ ಹೋರಿ, ಟಗರು, ಮತ್ತು ಕುರಿಮರಿಗಳನ್ನು ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
22 Y un macho de cabrío por expiación, allende del holocausto continuo, y su presente, y su derramadura.
೨೨ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
23 Y el cuarto día, diez becerros, dos carneros, catorce corderos perfectos de un año:
೨೩“‘ನಾಲ್ಕನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಹತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
24 Sus presentes y sus derramaduras con los becerros, con los carneros, y con los corderos según el número de ellos conforme a la ley:
೨೪ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
25 Y un macho de cabrío por expiación, allende del holocausto continuo, su presente y su derramadura.
೨೫ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
26 Y el quinto día, nueve becerros, dos carneros, catorce corderos sin tacha de un año:
೨೬“‘ಐದನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
27 Y sus presentes, y sus derramaduras con los becerros, con los carneros, y con los corderos según el número de ellos, conforme a la ley:
೨೭ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
28 Y un macho cabrío por expiación, allende del holocausto continuo, su presente y su derramadura.
೨೮ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
29 Y el sexto día, ocho becerros, dos carneros, catorce corderos sin defecto de un año:
೨೯“‘ಆರನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
30 Y sus presentes, y sus derramaduras con los becerros, con los carneros, y con los corderos según el número de ellos, conforme a la ley:
೩೦ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
31 Y un macho cabrío por expiación, allende del holocausto continuo, sus presentes y sus derramaduras.
೩೧ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
32 Y el séptimo día, siete becerros, dos carneros, catorce corderos perfectos de un año:
೩೨“‘ಏಳನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ದೋಷವಿಲ್ಲದ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
33 Y sus presentes, y sus derramaduras con los becerros, con los carneros, y con los corderos, según el número de ellos, conforme a su ley:
೩೩ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
34 Y un macho cabrío por expiación, allende del holocausto continuo, y su presente, y su derramadura.
೩೪ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
35 El octavo día tendréis solemnidad, ninguna obra servil haréis.
೩೫“‘ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು.
36 Y ofreceréis en holocausto, en ofrenda encendida a Jehová de olor de holganza, un novillo, un carnero, siete corderos perfectos de un año:
೩೬ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
37 Sus presentes, y sus derramaduras con el novillo, con el carnero, y con los corderos según el número de ellos conforme a la ley.
೩೭“‘ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು
38 Y un macho cabrío por expiación, allende del holocausto continuo, y su presente, y su derramadura.
೩೮ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
39 Estas cosas haréis a Jehová en vuestras solemnidades, allende de vuestros votos, y de vuestras ofrendas libres, en vuestros holocaustos, y en vuestros presentes, y en vuestras derramaduras, y en vuestras paces.
೩೯“‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’”
40 Y Moisés dijo a los hijos de Israel conforme a todo lo que Jehová había mandado a Moisés.
೪೦ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲರಿಗೆ ತಿಳಿಸಿದನು.

< Números 29 >