< Salmos 64 >

1 Oye, o! Dios, mi voz en mi oración: guarda mi vida del miedo del enemigo:
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.
2 Escóndeme del secreto consejo de los malignos: de la conspiración de los que obran iniquidad.
ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು.
3 Que afilaron su lengua, como espada: armaron por su saeta palabra amarga:
ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.
4 Para asaetar a escondidas al perfecto: de presto le asaetean, y no temen.
ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.
5 Afírmanse asimismos sobre palabra mala: tratan de esconder los lazos: dicen: ¿Quién los ha de ver?
ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.
6 Inquieren iniquidades; perficionan la inquisición del inquiridor, y lo que inventó lo íntimo de cada uno, y el corazón inventivo.
ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
7 Mas Dios los asaeteará con saeta, de repente serán sus plagas.
ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು.
8 Y harán caer sobre sí sus mismas lenguas: espantarse han todos los que los vieren.
ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.
9 Y temerán todos los hombres, y anunciarán la obra de Dios, y entenderán su obra.
ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.
10 El justo se alegrará en Jehová, y asegurarse ha en él: y alabarse han todos los rectos de corazón.
೧೦ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು.

< Salmos 64 >