< Jeremías 48 >

1 ACERCA de Moab. Así ha dicho Jehová de los ejércitos, Dios de Israel: ¡Ay de Nebo! que fué destruída, fué avergonzada; Chîriathaim fué tomada; fué confusa Misgab, y desmayó.
ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.
2 No se alabará ya más Moab; contra Hesbón maquinaron mal, [diciendo]: Venid, y quitémosla de entre las gentes. También tú, Madmén, serás cortada, espada irá tras ti.
ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, ‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.
3 ¡Voz de clamor de Horonaim, destrucción y gran quebrantamiento!
‘ಅಯ್ಯೋ, ಸೂರೆ ಹೋದೆವು, ಬಹು ನಾಶವಾದೆವು’ ಎಂಬ ಕೂಗಾಟವು ಹೊರೊನಯಿಮಿನಿಂದ ಕೇಳಬರುತ್ತದೆ!
4 Moab fué quebrantada; hicieron que se oyese el clamor de sus pequeños.
ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕುಗೆಟ್ಟವರು ಮೊರೆಯಿಟ್ಟಿದ್ದಾರೆ.
5 Porque á la subida de Luhith con lloro subirá el que llora; porque á la bajada de Horonaim los enemigos oyeron clamor de quebranto.
ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.
6 Huid, salvad vuestra vida, y sed como retama en el desierto.
ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ, ಅಡವಿಯಲ್ಲಿನ ಜಾಲಿಯಂತಿರಿ.
7 Pues por cuanto confiaste en tus haciendas, en tus tesoros, tú también serás tomada: y Chêmos saldrá en cautiverio, los sacerdotes y sus príncipes juntamente.
ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
8 Y vendrá destruidor á cada una de las ciudades, y ninguna ciudad escapará: arruinaráse también el valle, y será destruída la campiña, como ha dicho Jehová.
ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು.
9 Dad alas á Moab, para que volando se vaya; pues serán desiertas sus ciudades hasta no quedar en ellas morador.
ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.
10 Maldito el que hiciere engañosamente la obra de Jehová, y maldito el que detuviere su cuchillo de la sangre.
೧೦ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.
11 Quieto estuvo Moab desde su mocedad, y sobre sus heces ha estado él reposado, y no fué trasegado de vaso en vaso, ni nunca fué en cautiverio: por tanto quedó su sabor en él, y su olor no se ha trocado.
೧೧ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”
12 Por eso, he aquí que vienen días, ha dicho Jehová, en que yo le enviaré trasportadores que lo harán trasportar; y vaciarán sus vasos, y romperán sus odres.
೧೨ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ.
13 Y avergonzaráse Moab de Chêmos, á la manera que la casa de Israel se avergonzó de Beth-el, su confianza.
೧೩ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.
14 ¿Cómo diréis: Somos valientes, y robustos hombres para la guerra?
೧೪“‘ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು’ ಎಂದು ನೀವು ಅಂದುಕೊಳ್ಳುವುದು ಹೇಗೆ?
15 Destruído fué Moab, y sus ciudades asoló, y sus escogidos mancebos descendieron al degolladero, ha dicho el Rey, cuyo nombre es Jehová de los ejércitos.
೧೫ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.
16 Cercano está el quebrantamiento de Moab para venir, y su mal se apresura mucho.
೧೬ಮೋವಾಬಿಗೆ ದುರ್ಗತಿ ಸಮೀಪಿಸಿದೆ, ವಿಪತ್ತು ಬೇಗ ಬರುವುದು.
17 Compadeceos de él todos los que estáis alrededor suyo; y todos los que sabéis su nombre, decid: ¿Cómo se quebró la vara de fortaleza, el báculo de hermosura?
೧೭ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. ‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ.
18 Desciende de la gloria, siéntate en seco, moradora hija de Dibón; porque el destruidor de Moab subió contra ti, disipó tus fortalezas.
೧೮ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.
19 Párate en el camino, y mira, oh moradora de Aroer: pregunta á la que va huyendo, y á la que escapó; dile: ¿Qué ha acontecido?
೧೯ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ; ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ ‘ಏನಾಯಿತು?’ ಎಂದು ವಿಚಾರಿಸಿರಿ.
20 Avergonzóse Moab, porque fué quebrantado: aullad y clamad: denunciad en Arnón que Moab es destruído.
೨೦ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.
21 Y que vino juicio sobre la tierra de la campiña; sobre Holón, y sobre Jahzah, y sobre Mephaath,
೨೧ಮೇಲ್ನಾಡಿಗೆ ದಂಡನೆಯಾಗಿದೆ; ಹೋಲೋನ್, ಯಾಚಾ, ಮೆಫಾತ್,
22 Y sobre Dibón, y sobre Nebo, y sobre Beth-diblathaim,
೨೨ದೀಬೋನ್, ನೆಬೋ ಮತ್ತು ಬೇತ್ ದಿಬ್ಲಾತಯಿಮ್,
23 Y sobre Chîriathaim, y sobre Beth-gamul, y sobre Beth-meon,
೨೩ಕಿರ್ಯಾತಯಿಮ್, ಬೇತ್ ಗಾಮೂಲ್ ಮತ್ತು ಬೇತ್ ಮೆಯೋನ್,
24 Y sobre Chêrioth, y sobre Bosra, y sobre todas las ciudades de tierra de Moab, las de lejos y las de cerca.
೨೪ಕೆರೀಯೋತ್, ಬೊಚ್ರ ಅಂತು ದೂರದ ಮತ್ತು ಹತ್ತಿರದ ಮೋವಾಬಿನ ಎಲ್ಲಾ ಪಟ್ಟಣಗಳಿಗೂ ದಂಡನೆಯಾಗದೆ ಇರುವುದಿಲ್ಲ.
25 Cortado es el cuerno de Moab, y su brazo quebrantado, dice Jehová.
೨೫ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ” ಎಂಬುದೇ.
26 Embriagadlo, porque contra Jehová se engrandeció; y revuélquese Moab sobre su vómito, y sea también él por escarnio.
೨೬“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.
27 ¿Y no te fué á ti Israel por escarnio, como si lo tomaran entre ladrones? porque desde que de él hablaste, tú te has movido.
೨೭ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?
28 Desamparad las ciudades, y habitad en peñascos, oh moradores de Moab; y sed como la paloma que hace nido detrás de la boca de la caverna.
೨೮ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;
29 Oído hemos la soberbia de Moab, que es muy soberbio: su hinchazón y su orgullo, y su altivez y la altanería de su corazón.
೨೯ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ, ಅವರ ಡಂಭ, ಅಹಂಕಾರ, ಸ್ವಾಭಿಮಾನ ಮತ್ತು ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.”
30 Yo conozco, dice Jehová, su cólera; mas no tendrá efecto: sus mentiras no han de aprovechar[le].
೩೦ಯೆಹೋವನು ಹೇಳುವುದೇನೆಂದರೆ, “ಅವರ ಗರ್ವೋದ್ರೇಕವು ನನಗೆ ಗೊತ್ತು, ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವುದೆಲ್ಲಾ ನಿರರ್ಥಕ.
31 Por tanto yo aullaré sobre Moab, y sobre todo Moab haré clamor, y sobre los hombres de Kir-heres gemiré.
೩೧ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು.
32 Con lloro de Jazer lloraré por ti, oh vid de Sibma: tus sarmientos pasaron la mar, llegaron hasta la mar de Jazer: sobre tu agosto y sobre tu vendimia vino destruidor.
೩೨ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.
33 Y será cortada la alegría y el regocijo de los campos labrados, y de la tierra de Moab: y haré cesar el vino de los lagares: no pisarán con canción; la canción no será canción.
೩೩ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.
34 El clamor, desde Hesbón hasta Eleale; hasta Jaaz dieron su voz: desde Zoar hasta Horonaim, becerra de tres años: porque también las aguas de Nimrin serán destruídas.
೩೪ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.
35 Y haré cesar de Moab, dice Jehová, quien sacrifique en altar, y quien ofrezca sahumerio á sus dioses.
೩೫ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.”
36 Por tanto, mi corazón resonará como flautas por causa de Moab, asimismo resonará mi corazón á modo de flautas por los hombres de Kir-heres: porque perecieron las riquezas que había hecho.
೩೬ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.
37 Porque en toda cabeza habrá calva, y toda barba será raída; sobre todas manos rasguños, y sacos sobre todos los lomos.
೩೭ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.
38 Sobre todas las techumbres de Moab y en sus calles, todo él será llanto; porque yo quebranté á Moab como á vaso que no agrada, dice Jehová.
೩೮ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.
39 Aullad: ¡Cómo ha sido quebrantado! ¡cómo volvió la cerviz Moab, y fué avergonzado! Y fué Moab en escarnio y en espanto á todos los que están en sus alrededores.
೩೯ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.
40 Porque así ha dicho Jehová: He aquí que como águila volará, y extenderá sus alas á Moab.
೪೦ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.
41 Tomadas son las ciudades, y tomadas son las fortalezas; y será aquel día el corazón de los valientes de Moab como el corazón de mujer en angustias.
೪೧ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
42 Y Moab será destruído para dejar de ser pueblo: porque se engrandeció contra Jehová.
೪೨ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”
43 Miedo y hoyo y lazo sobre ti, oh morador de Moab, dice Jehová.
೪೩ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ;
44 El que huyere del miedo, caerá en el hoyo; y el que saliere del hoyo, será preso del lazo: porque yo traeré sobre él, sobre Moab, año de su visitación, dice Jehová.
೪೪ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”
45 A la sombra de Hesbón se pararon los que huían de la fuerza; mas salió fuego de Hesbón, y llama de en medio de Sihón, y quemó el rincón de Moab, y la mollera de los hijos revoltosos.
೪೫ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.
46 ¡Ay de ti, Moab! pereció el pueblo de Chêmos: porque tus hijos fueron presos para cautividad, y tus hijas para cautiverio.
೪೬“ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ? ಕೆಮೋಷಿನ ಭಕ್ತರು ನಾಶವಾದರು; ನಿನ್ನ ಗಂಡು, ಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು.
47 Empero haré tornar el cautiverio de Moab en lo postrero de los tiempos, dice Jehová. Hasta aquí es el juicio de Moab.
೪೭ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.

< Jeremías 48 >