< Salmos 108 >

1 Canción: Salmo de David. MI corazón está dispuesto, oh Dios; cantaré y salmearé todavía en mi gloria.
ದಾವೀದನ ಕೀರ್ತನೆ. ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ!
2 Despiértate, salterio y arpa: despertaré al alba.
ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
3 Te alabaré, oh Jehová, entre los pueblos; á ti cantaré salmos entre las naciones.
ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
4 Porque grande más que los cielos es tu misericordia, y hasta los cielos tu verdad.
ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ, ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ.
5 Ensálzate, oh Dios, sobre los cielos; y sobre toda la tierra tu gloria.
ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
6 Para que sean librados tus amados, salva con tu diestra y respóndeme.
ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು, ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
7 Dios habló por su santuario: alegraréme, repartiré á Sichêm, y mediré el valle de Succoth.
ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳತೆಮಾಡಿ ಕೊಡುವೆನು.
8 Mío es Galaad, mío es Manasés; y Ephraim es la fortaleza de mi cabeza; Judá es mi legislador;
ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು. ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.
9 Moab, la vasija de mi lavatorio: sobre Edom echaré mi calzado; regocijaréme sobre Palestina.
ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು.
10 ¿Quién me guiará á la ciudad fortalecida? ¿quién me guiará hasta Idumea?
೧೦ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
11 Ciertamente tú, oh Dios, que nos habías desechado; y no salías, oh Dios, con nuestros ejércitos.
೧೧ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿಯಾ?
12 Danos socorro en la angustia: porque mentirosa es la salud del hombre.
೧೨ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ.
13 En Dios haremos proezas: y él hollará nuestros enemigos.
೧೩ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.

< Salmos 108 >