< Kutoka 14 >

1 Yahweh akasema na Musa na kumwambia,
ಯೆಹೋವನು ಮೋಶೆಯ ಸಂಗಡ ಮಾತನಾಡಿ
2 “Waambie Waisraeli wageuke na kueka kambi mbele ya Pi Hahirothi, katikati ya Migdoli na bahari, mbele ya Baali Zefoni. Wapaswa kueka kambi pembenni ya Pi Hahirothi.
“ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.
3 Farao atasema kuhusu Waisraeli, 'Wanaangaika kwenye nchi. Nyikani imewafunika.'
ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು.
4 Nitaufanya moyo wa Farao mgumu, na yeye ata wakimbiza. Nitapata utukufu kwasababu ya Farao na jeshi lake lote. Wamisri watajua mimi ni Yahweh.” Kisha Waisraeli wakaeka kambi kama walivyo elekezwa.
ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.
5 Mfalme wa Misri alipo ambiwa Waisraeli wametoroka, nia ya Farao na watumishi wake ikageuka dhidi ya watu. Wakasema, “Tumefanya nini kwa kuwaacha Waisraeli waende huru na wasitutumikie?”
ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು.
6 Kisha Farao akachukuwa magari yake ya farasi na jeshi lake.
ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು.
7 Alichukuwa magari ya farasi mia sita imara na magari yote ya farasi ya Misri, pamoja na maafisa wa hayo magari.
ಶ್ರೇಷ್ಠವಾದ ಆರುನೂರು ರಥಗಳನ್ನೂ, ಐಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು. ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು.
8 Yahweh akafanya mgumu moyo wa Farao, mfalme wa Misri, na mfalme akawafukuzia Waisraeli. Sasa Waisraeli waliondoka kwa shangwe.
ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.
9 Lakini Wamisri wali wafukuzia, pamoja na farasi na magari ya farasi, wapanda farasi, na jeshi lake. Walikuta Waisraeli wameeka kambi pembezoni mwa bahari kati ya Pi Hahirothi na Baali Zefoni.
ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು.
10 Farao alipo karibia, Waisraeli walitaza juu na kushangaa. Wamisri walikuwa wakija kwao, na waliogopa. Waisraeli walimlilia Yahweh.
೧೦ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.
11 Walimwambia Musa, “Ni kwasababu hakukuwa na makaburi Misri, hadi umetuleta tufe huku nyikani? Kwanini umetutendea hivi, kwa kututoa Misri?
೧೧ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?
12 Hili si ndilo tulilo kwambia Misri? Tulikwambia, 'Utuache, ili tuwafanyie Wamisri kazi.' Ingekuwa bora kwetu sisi kuwafanyia kazi kuliko kufa nyikani.”
೧೨ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು.
13 Musa akawaambia watu, “Msiogope. Simameni imara na muone wokovu Yahweh atakao uleta kwenu leo. Kwa maana hamtawaona tena Wamisri mnao waona leo.
೧೩ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.
14 Yahweh ata wapigania, na ninyi mtasima imara.”
೧೪ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.
15 Kisha Yahweh akamwambia Musa, “Kwanini wewe, Musa, unaendelea kuniita mimi? Waambie Waisraeli waendelee mbele.
೧೫ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ನನಗೆ ಮೊರೆಯಿಡುವುದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲರಿಗೆ ಹೇಳು.
16 Nyanyua gongo lako juu, nyoosha mkono wako kuelekea baharini na uigawanye sehemu mbili, ili watu wa Israeli wapite baharini kwenye nchi kavu.
೧೬ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು.
17 Jitahadharishe kuwa nitafanya mioyo ya Wamisri kuwa migumu ili wawafuate. Nitapata utukufu kwasababu ya Farao na jeshi lake lote, magari yake ya farasi, na wapanda farasi.
೧೭ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.
18 Kisha Wamisri watajua kuwa mimi ni Yahweh nitakapo pata utukufu kwasababu ya Farao, magari yake ya farasi, na wapanda farasi wake.”
೧೮ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಎಂದನು.
19 Malaika wa Mungu, aliyeenda mbele ya Waisraeli, aliama na kwenda nyuma yao. Nguzo ya wingu ili sogea mbele yao na kwenda kusimama nyumba yao.
೧೯ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
20 Wingu lilikuja katikati ya kambi ya Misri na kambi ya Israeli. Lilikuwa wingu jeusi kwa Wamisri, lakini liliangaza usiku kwa ajili ya Waisraeli, hivyo upande mmoja haukuweza kuja karibu ya mwingine usiku wote.
೨೦ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ.
21 Musa akanyoosha mkono wake kuelekea bahari. Yahweh akasogeza bahari nyuma kwa upepo mkali wa mashariki usiku huo wote na kufanya bahari nchi kavu. Kwa namna hii maji yaligawanyika.
೨೧ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.
22 Waisraeli walienda katikati ya bahari kwa nchi kavu. Maji yaliunda ukuta mkono wao wa kulia na mkono wao wa kushoto.
೨೨ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.
23 Wamisri waka wafukuzia. Wali wafuata hadi katikati ya bahari - farasi wote wa Farao, magari ya farasi, na wapanda farasi.
೨೩ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.
24 Lakini masaa ya mapema ya asubui, Yahweh alitazama chini jeshi la Wamisri kupitia nguzo ya moto na wingu. Alisababisha hofu miongoni mwa Wamisri.
೨೪ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು.
25 Magari yao ya farasi yalikuwa yana kwama matairi, na wapanda farasi waliendesha kwa ugumu. Hivyo Wamisri walisema, “Acha tuwakimbie Waisraeli, kwa kuwa Yahweh anawapigania dhidi yetu.”
೨೫ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.
26 Yahweh akamwambia Musa, “Nyoosha mkono kuelekea bahari ili maji yawarudie Wamisri, magari yao ya farasi, na wapanda farasi wao.”
೨೬ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು.
27 Hivyo Musa akanyoosha mkono wake kuelekea bahari, na ikarudi kwenye hali yake ya kawaida palipo pambazuka. Wamisri walikimbilia ndani ya bahari, na Yahweh akawaingiza Wamisri katikati ndani yake.
೨೭ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು.
28 Maji yakarudi na kufunika magari ya farasi ya Farao, wapanda farasi, na jeshi lake lote lililo fuata magari ya farasi kwenye bahari. Hakuna aliyepona.
೨೮ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.
29 Walakini, Waisraeli walitembea kwenye nchi kavu katikati ya bahari. Maji yalikuwa ukuta kwao mkono wa kulia na mkono wa kushoto.
೨೯ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.
30 Hivyo Yahweh akaokoa Israeli hiyo siku kutoka mkono wa Wamisri, na Israeli ikaona maiti za Wamisri ufukweni.
೩೦ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.
31 Israeli ilipoona nguvu kubwa Yahweh aliyo itumia dhidi ya Wamisri, watu walimsifu Yahweh, na kumwamini Yahweh na mtumishi wake Musa.
೩೧ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.

< Kutoka 14 >