< 2 Petrus 2 >

1 Ama İsrail halkı arasında sahte peygamberler vardı; tıpkı sizin de aranızda yanlış öğreti yayanlar olacağı gibi. Bunlar kendilerini satın alan Efendi'yi bile yadsıyarak gizlice aranıza yıkıcı öğretiler sokacaklar. Böyleleri kendi başlarına ani bir yıkım getirecek.
ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
2 Birçokları da onların sefahatine kapılacak. Onların yüzünden gerçeğin yoluna sövülecek.
ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
3 Açgözlülüklerinden ötürü uydurma sözlerle sizi sömürecekler. Onlar için çoktan beri verilmiş olan yargı gecikmez. Onları bekleyen yıkım da uyuklamaz.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
4 Tanrı günah işleyen melekleri esirgemedi; onları cehenneme atıp karanlıkta zincire vurdu. Yargılanıncaya dek orada tutulacaklar. (Tartaroō g5020)
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. (Tartaroō g5020)
5 Tanrı eski dünyayı da esirgemedi. Ama tanrısızların dünyasına tufanı gönderdiğinde, doğruluk yolunu bildiren Nuh'u ve yedi kişiyi daha korudu.
ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
6 Sodom ve Gomora kentlerini yakıp yıkarak yargıladı. Böylece tanrısızların başına geleceklere bir örnek verdi.
ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
7 Ama ilke tanımayan kişilerin sefih yaşayışından azap duyan doğru adam Lut'u kurtardı.
ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.
8 Çünkü onların arasında yaşayan bu doğru adam, görüp işittiği yasa tanımaz davranışlar yüzünden doğru yüreğinde her gün ıstırap çekerdi.
ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
9 Görülüyor ki Rab kendi yolunda yürüyenleri karşılaştıkları denemelerden nasıl kurtaracağını bilir. Doğru olmayanları, özellikle benliğin yozlaşmış tutkuları ardından giden ve yetkisini hor görenleri cezalandırarak yargı gününe dek nasıl alıkoyacağını da bilir. Bu küstah, dikbaşlı kişiler yüce varlıklara sövmekten korkmazlar.
ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
೧೦ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
11 Oysa melekler bile, güç ve kudrette daha üstün oldukları halde bu varlıkları Rab'bin önünde söverek yargılamazlar.
೧೧ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
12 Ama anlamadıkları konularda sövüp sayan bu kişiler, içgüdüleriyle yaşayan, yakalanıp boğazlanmak üzere doğan, akıldan yoksun hayvanlar gibidir. Hayvanlar gibi onlar da yıkıma uğrayacaklar.
೧೨ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.
13 Ettikleri haksızlığa karşılık zarar görecekler. Gündüzün zevk alemlerine dalmayı eğlence sayarlar. Birer leke ve yüzkarasıdırlar. Sizinle yiyip içerken kendi hilelerinden zevk alırlar.
೧೩ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
14 Gözleri zinayla doludur, günaha doymazlar. Kararsız kişileri ayartırlar. Yüreği açgözlülüğe alıştırılmış lanetli insanlardır.
೧೪ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
15 Haksızlıkla elde ettiği kazancı seven Beor oğlu Balam'ın yolunu tutarak doğru yolu bırakıp saptılar.
೧೫ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
16 Balam işlediği suçtan ötürü azarlandı. Konuşamayan eşek, insan diliyle konuşarak bu peygamberin çılgınlığına engel oldu.
೧೬ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.
17 Bu kişiler, susuz pınarlar, fırtınanın dağıttığı sis gibidirler. Onları koyu karanlık bekliyor.
೧೭ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ. (questioned)
18 Çünkü yanlış yolda yürüyenlerden henüz kurtulanları, boş ve kurumlu sözler söyleyerek benliğin tutkularıyla, sefahatle ayartırlar.
೧೮ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
19 Onlara özgürlük vaat ederler, oysa kendileri yozlaşmışlığın kölesidirler. Çünkü insan neye yenilirse onun kölesi olur.
೧೯ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.
20 Rab ve Kurtarıcı İsa Mesih'i tanımakla dünyanın çirkefliğinden kurtulduktan sonra yine aynı işlere karışıp yenilirlerse, son durumları ilk durumlarından beter olur.
೨೦ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
21 Çünkü doğruluk yolunu bilip de kendilerine emanet edilen kutsal buyruktan geri dönmektense, bu yolu hiç bilmemiş olmak onlar için daha iyi olurdu.
೨೧ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.
22 Şu gerçek özdeyiş onların durumunu anlatıyor: “Köpek kendi kusmuğuna döner”, “Domuz da yıkandıktan sonra çamurda yuvarlanmaya döner.”
೨೨“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.

< 2 Petrus 2 >