< 1 कुरिन्थियों 12 >

1 ऐ भाइयों! मैं नहीं चाहता कि तुम पाक रूह की ने'मतों के बारे में बेख़बर रहो।
ಸಹೋದರರೇ ಪವಿತ್ರಾತ್ಮನಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿವಳಿಕೆಯಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
2 तुम जानते हो कि जब तुम ग़ैर क़ौम थे, तो गूँगे बुतों के पीछे जिस तरह कोई तुम को ले जाता था; उसी तरह जाते थे।
ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
3 पस मैं तुम्हें बताता हूँ कि जो कोई ख़ुदा के रूह की हिदायत से बोलता है; वो नहीं कहता कि ईसा मला'ऊन है; और न कोई रूह उल — क़ुद्दूस के बग़ैर कह सकता है कि ईसा ख़ुदावन्द है।
ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.
4 नेअ'मतें तो तरह तरह की हैं मगर रूह एक ही है।
ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ.
5 और ख़िदमतें तो तरह तरह की हैं मगर ख़ुदावन्द एक ही है।
ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಕರ್ತನು ಒಬ್ಬನೇ.
6 और तासीरें भी तरह तरह की हैं मगर ख़ुदा एक ही है जो सब में हर तरह का असर पैदा करता है।
ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಸರ್ವರಲ್ಲಿಯೂ ಸರ್ವ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.
7 लेकिन हर शख़्स में पाक रूह का ज़ाहिर होना फ़ाइदा पहुँचाने के लिए होता है।
ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ.
8 क्यूँकि एक को रूह के वसीले से हिक्मत का कलाम इनायत होता है और दूसरे को उसी रूह की मर्ज़ी के मुवाफ़िक़ इल्मियत का कलाम।
ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು
9 किसी को उसी रूह से ईमान और किसी को उसी रूह से शिफ़ा देने की तौफ़ीक़।
ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು,
10 किसी को मोजिज़ों की क़ुदरत, किसी को नबुव्वत, किसी को रूहों का इम्तियाज़, किसी को तरह तरह की ज़बाने, किसी को ज़बानों का तर्जुमा करना।
೧೦ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.
11 लेकिन ये सब तासीरें वही एक रूह करता है; और जिस को जो चाहता है बाँटता है,
೧೧ಆದರೆ ಈ ಎಲ್ಲವುಗಳಲ್ಲಿ ಕಾರ್ಯ ಮಾಡುವ ಆ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ.
12 क्यूँकि जिस तरह बदन एक है और उस के आ'ज़ा बहुत से हैं, और बदन के सब आ'ज़ा गरचे बहुत से हैं, मगर हमसब मिलकर एक ही बदन हैं; उसी तरह मसीह भी है।
೧೨ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ.
13 क्यूँकि हम सब में चाहे यहूदी हों, चाहे यूनानी, चाहे ग़ुलाम, चाहे आज़ाद, एक ही रूह के वसीले से एक बदन होने के लिए बपतिस्मा लिया और हम सब को एक ही रूह पिलाया गया।
೧೩ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.
14 चुनाँचे बदन में एक ही आ'ज़ा नहीं बल्कि बहुत से हैं
೧೪ದೇಹವು ಒಂದೇ ಅಂಗವಲ್ಲ. ಅನೇಕ ಅಂಗಗಳುಳ್ಳದ್ದಾಗಿದೆ.
15 अगर पाँव कहे चुँकि मैं हाथ नहीं इसलिए बदन का नहीं तो वो इस वजह से बदन से अलग तो नहीं।
೧೫ಕಾಲು “ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ?
16 और अगर कान कहे चुँकि मैं आँख नहीं इसलिए बदन का नहीं तो वो इस वजह से बदन से अलग तो नहीं।
೧೬ಕಿವಿ “ನಾನು ಕಣ್ಣಲ್ಲದ ಕಾರಣ ನಾನು ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ?
17 अगर सारा बदन आँख ही होता तो सुनना कहाँ होता? अगर सुनना ही सुनना होता तो सूँघना कहाँ होता?
೧೭ದೇಹವೆಲ್ಲಾ ಕಣ್ಣಾದರೆ ನೀವು ಏನೂ ಕೇಳಲಾಗುತ್ತಿರಲಿಲ್ಲ. ದೇಹವೆಲ್ಲಾ ಕಿವಿಯಾದರೆ ನೀವು ಯಾವ ವಾಸನೆಯನ್ನು ಮೂಸಲಾಗುತ್ತಿರಲಿಲ್ಲ.
18 मगर हक़ीक़त में ख़ुदा ने हर एक 'उज़्व को बदन में अपनी मर्ज़ी के मुवाफ़िक़ रख्खा है।
೧೮ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ.
19 अगर वो सब एक ही 'उज़्व होते तो बदन कहाँ होता?
೧೯ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವುದು?
20 मगर अब आ'ज़ा तो बहुत हैं लेकिन बदन एक ही है।
೨೦ಆದರೆ ಅಂಗಗಳು ಅನೇಕವಾಗಿದೆ ಆದರೆ ದೇಹವು ಒಂದೇ.
21 पस आँख हाथ से नहीं कह सकती, “मैं तेरी मोहताज नहीं,” और न सिर पाँव से कह सकता है, “मैं तेरा मोहताज नहीं।”
೨೧ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ.
22 बल्कि बदन के वो आ'ज़ा जो औरों से कमज़ोर मा'लूम होते हैं बहुत ही ज़रूरी हैं।
೨೨ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ?
23 और बदन के वो आ'ज़ा जिन्हें हम औरों की तरह ज़लील जानते हैं उन्हीं को ज़्यादा इज़्ज़त देते हैं और हमारे नाज़ेबा आ'ज़ा बहुत ज़ेबा हो जाते हैं।
೨೩ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವುದುಂಟಲ್ಲಾ. ಹೀಗೆ ಮಾನವಿಲ್ಲದ ಅಂಗಗಳಿಗೆ ಹೆಚ್ಚಾದ ಮಾನವುಂಟಾಗುತ್ತದೆ.
24 हालाँकि हमारे ज़ेबा आ'ज़ा मोहताज नहीं मगर ख़ुदा ने बदन को इस तरह मुरक्कब किया है, कि जो 'उज़्व मोहताज है उसी को ज़्यादा 'इज़्ज़त दी जाए।
೨೪ಮಾನವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೇ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಜೋಡಿಸಿದ್ದಾನೆ.
25 ताकि बदन में जुदाई न पड़े, बल्कि आ'ज़ा एक दूसरे की बराबर फ़िक्र रख्खें।
೨೫
26 पस अगर एक 'उज़्व दुःख पाता है तो सब आ'ज़ा उस के साथ दुःख पाते हैं।
೨೬ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
27 इसी तरह तुम मिल कर मसीह का बदन हो और फ़र्दन आ'ज़ा हो।
೨೭ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.
28 और ख़ुदा ने कलीसिया में अलग अलग शख़्स मुक़र्रर किए पहले रसूल दूसरे नबी तीसरे उस्ताद फिर मोजिज़े दिखाने वाले फिर शिफ़ा देने वाले मददगार मुन्तज़िम तरह तरह की ज़बाने बोलने वाले।
೨೮ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
29 क्या सब रसूल हैं? क्या सब नबी हैं? क्या सब उस्ताद हैं? क्या सब मोजिज़े दिखानेवाले हैं?
೨೯ಎಲ್ಲರು ಅಪೊಸ್ತಲರೋ? ಎಲ್ಲರು ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?
30 क्या सब को शिफ़ा देने की ताक़त हासिल हुई? क्या सब तरह की ज़बाने बोलते हैं? क्या सब तर्जुमा करते हैं?
೩೦ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ?
31 तुम बड़ी से बड़ी ने'मत की आरज़ू रख्खो, लेकिन और भी सब से उम्दा तरीक़ा तुम्हें बताता हूँ।
೩೧ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಸರ್ವೋತ್ತಮವಾದ ಮಾರ್ಗವೊಂದನ್ನು ನಿಮಗೆ ತೋರಿಸುತ್ತೇನೆ.

< 1 कुरिन्थियों 12 >