< 1 पतरस 5 >

1 तुम में जो बुज़ुर्ग हैं, मैं उनकी तरह बुज़ुर्ग और मसीह के दुखों का गवाह और ज़ाहिर होने वाले जलाल में शरीक होकर उनको ये नसीहत करता हूँ।
ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,
2 कि ख़ुदा के उस गल्ले की गल्लेबानी करो जो तुम में है; लाचारी से निगहबानी न करो, बल्कि ख़ुदा की मर्ज़ी के मुवाफ़िक़ ख़ुशी से और नाजायज़ नफ़े' के लिए नहीं बल्कि दिली शौक़ से।
ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.
3 और जो लोग तुम्हारे सुपुर्द हैं उन पर हुकूमत न जताओ, बल्कि गल्ले के लिए नमूना बनो।
ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
4 और जब सरदार गल्लेबान ज़ाहिर होगा, तो तुम को जलाल का ऐसा सहारा मिलेगा जो मुरझाने का नहीं।
ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.
5 ऐ जवानो! तुम भी बुज़ुर्गों के ताबे' रहो, बल्कि सब के सब एक दूसरे की ख़िदमत के लिए फ़रोतनी से कमर बस्ता रहो, इसलिए कि “ख़ुदा मग़रुरों का मुक़ाबिला करता है, मगर फ़रोतनों को तौफ़ीक़ बख्शता है।”
ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”
6 पस ख़ुदा के मज़बूत हाथ के नीचे फ़रोतनी से रहो, ताकि वो तुम्हें वक़्त पर सरबलन्द करे।
ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.
7 अपनी सारी फ़िक्र उसी पर डाल दो, क्यूँकि उसको तुम्हारी फ़िक्र है।
ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
8 तुम होशियार और बेदार रहो; तुम्हारा मुख़ालिफ़ इब्लीस गरजने वाले शेर — ए — बबर की तरह ढूँडता फिरता है कि किसको फाड़ खाए।
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
9 तुम ईमान में मज़बूत होकर और ये जानकर उसका मुक़ाबिला करो कि तुम्हारे भाई जो दुनिया में हैं ऐसे ही दुःख उठा रहे हैं
ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.
10 अब ख़ुदा जो हर तरह के फ़ज़ल का चश्मा है, जिसने तुम को मसीह ईसा में अपने अबदी जलाल के लिए बुलाया, तुम्हारे थोड़ी मुद्दत तक दुःख उठाने के बाद आप ही तुम्हें कामिल और क़ाईम और मज़बूत करेगा। (aiōnios g166)
೧೦ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು. (aiōnios g166)
11 हमेशा से हमेशा तक उसी की सल्तनत रहे। आमीन। (aiōn g165)
೧೧ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. (aiōn g165)
12 मैंने सिलवानुस के ज़रिए, जो मेरी दानिस्त में दियानतदार भाई है, मुख़्तसर तौर पर लिख कर तुम्हें नसीहत की और ये गवाही दी कि ख़ुदा का सच्चा फ़ज़ल यही है, इसी पर क़ाईम रहो।
೧೨ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.
13 जो बाबुल में तुम्हारी तरह बरगुज़ीदा है, वो और मेरा मरकुस तुम्हें सलाम कहते हैं।
೧೩ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ.
14 मुहब्बत से बोसा ले लेकर आपस में सलाम करो। तुम सबको जो मसीह में हो, इत्मीनान हासिल होता रहे।
೧೪ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ ಸಮಾಧಾನವುಂಟಾಗಲಿ.

< 1 पतरस 5 >