< 1 थिस्सलुनीकियों 2 >

1 ऐ भाइयों! तुम आप जानते हो कि हमारा तुम्हारे पास आना बेफ़ाइदा न हुआ।
ಸಹೋದರರೇ, ನಾವು ವ್ಯರ್ಥವಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ,
2 बल्कि तुम को मा'लूम ही है कि बावजूद पहले फ़िलिप्पी में दु: ख उठाने और बेइज़्ज़त होने के हम को अपने ख़ुदा में ये दिलेरी हासिल हुई कि ख़ुदा की ख़ुशख़बरी बड़ी जाँफ़िशानी से तुम्हें सुनाएँ।
ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.
3 क्यूँकि हमारी नसीहत न गुमराही से है न नापाकी से न धोखे के साथ।
ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ.
4 बल्कि जैसे ख़ुदा ने हम को मक़्बूल करके ख़ुशख़बरी हमारे सुपुर्द की वैसे ही हम बयान करते हैं; आदमियों को नहीं बल्कि ख़ुदा को ख़ुश करने के लिए जो हमारे दिलों को आज़माता है।
ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.
5 क्यूँकि तुम को मा'लूम ही है कि न कभी हमारे कलाम में ख़ुशामद पाई गई न लालच का पर्दा बना ख़ुदा इसका गवाह है!
ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ.
6 और हम न आदमियों से इज़्ज़त चाहते हैं न तुम से न औरों से अगरचे मसीह के रसूल होने की वजह तुम पर बोझ डाल सकते थे।
ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.
7 बल्कि जिस तरह माँ अपने बच्चों को पालती है उसी तरह हम तुम्हारे दर्मियान नर्मी के साथ रहे।
ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ.
8 और उसी तरह हम तुम्हारे बहुत अहसानमंद होकर न फ़क़त ख़ुदा की ख़ुशख़बरी बल्कि अपनी जान तक भी तुम्हें देने को राज़ी थे; इस वास्ते कि तुम हमारे प्यारे हो गए थे!
ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.
9 क्यूँकि ऐ भाइयों! तुम को हमारी मेहनत और मशक़्क़त याद होगी कि हम ने तुम में से किसी पर बोझ न डालने की ग़रज़ से रात दिन मेहनत मज़दूरी करके तुम्हें ख़ुदा की ख़ुशख़बरी की मनादी की।
ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.
10 तुम भी गवाह हो और ख़ुदा भी कि तुम से जो ईमान लाए हो हम कैसी पाकीज़गी और रास्तबाज़ी और बे'ऐबी के साथ पेश आए।
೧೦ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.
11 चुनाँचे तुम जानते हो। कि जिस तरह बाप अपने बच्चों के साथ करता है उसी तरह हम भी तुम में से हर एक को नसीहत करते और दिलासा देते और समझाते रहे।
೧೧ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,
12 ताकि तुम्हारा चालचलन ख़ुदा के लायक़ हो जो तुम्हें अपनी बादशाही और जलाल में बुलाता है।
೧೨ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.
13 इस वास्ते हम भी बिला नाग़ा ख़ुदा का शुक्र करते हैं कि जब ख़ुदा का पैग़ाम हमारे ज़रिए तुम्हारे पास पहुँचा तो तुम ने उसे आदमियों का कलाम समझ कर नहीं बल्कि जैसा हक़ीक़त में है ख़ुदा का कलाम जान कर क़ुबूल किया और वो तुम में जो ईमान लाए हो असर भी कर रहा है।
೧೩ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.
14 इसलिए कि तुम ऐ भाइयों!, ख़ुदा की उन कलीसियाओं की तरह बन गए जो यहूदिया में मसीह ईसा में हैं क्यूँकि तुम ने भी अपनी क़ौम वालों से वही तकलीफ़ें उठाईं जो उन्होंने यहूदियों से।
೧೪ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
15 जिन्होंने ख़ुदावन्द ईसा को भी मार डाला और हम को सता सता कर निकाल दिया वो ख़ुदा को पसन्द नहीं आते और सब आदमियों के ख़िलाफ़ हैं।
೧೫ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
16 और वो हमें ग़ैर क़ौमों को उनकी नजात के लिए कलाम सुनाने से मनह करते हैं ताकि उन के गुनाहों का पैमाना हमेशा भरता रहे; लेकिन उन पर इन्तिहा का ग़ज़ब आ गया।
೧೬ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.
17 ऐ भाइयों! जब हम थोड़े अर्से के लिए ज़ाहिर में न कि दिल से तुम से जुदा हो गए तो हम ने कमाल आरज़ू से तुम्हारी सूरत देखने की और भी ज़्यादा कोशिश की।
೧೭ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.
18 इस वास्ते हम ने या'नी मुझ पौलुस ने एक दफ़ा' नहीं बल्कि दो दफ़ा' तुम्हारी पास आना चाहा मगर शैतान ने हमें रोके रखा।
೧೮ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ ಅಡ್ಡಿ ಮಾಡಿದನು.
19 भला हमारी उम्मीद और ख़ुशी और फ़ख़्र का ताज क्या है? क्या वो हमारे ख़ुदावन्द के सामने उसके आने के वक़्त तुम ही न होगे।
೧೯ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.
20 हमारा जलाल और ख़ुशी तुम्हीं तो हो।
೨೦ಹೀಗಿರಲಾಗಿ ನೀವೇ ನಮ್ಮ ಮಹಿಮೆ ಮತ್ತು ಸಂತೋಷವೂ ಆಗಿದ್ದೀರಿ.

< 1 थिस्सलुनीकियों 2 >