< 1 तीमुथियुस 2 >

1 पस मैं सबसे पहले ये नसीहत करता हूँ, कि मुनाजातें, और दू'आएँ और, इल्तिजाएँ और शुक्र्गुज़ारियाँ सब आदमियों के लिए की जाएँ,
ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ.
2 बादशाहों और सब बड़े मरतबे वालों के वास्ते इसलिए कि हम कमाल दीनदारी और सन्जीदगी से चैन सुकून के साथ ज़िन्दगी गुजारें।
ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.
3 ये हमारे मुन्जी ख़ुदा के नज़दीक 'उम्दा और पसन्दीदा है।
ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ.
4 वो चाहता है कि सब आदमी नजात पाएँ, और सच्चाई की पहचान तक पहुंचें।
ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.
5 क्यूँकि ख़ुदा एक है, और ख़ुदा और इंसान के बीच में दर्मियानी भी एक या'नी मसीह ईसा जो इंसान है।
ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.
6 जिसने अपने आपको सबके फ़िदया में दिया कि मुनासिब वक़्तों पर इसकी गवाही दी जाए।
ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.
7 मैं सच कहता हूँ, झूठ नहीं बोलता, कि मैं इसी ग़रज़ से ऐलान करने वाला और रसूल और ग़ैर — क़ौमों को ईमान और सच्चाई की बातें सिखाने वाला मुक़र्रर हुआ।
ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.
8 पस मैं चाहता हूँ कि मर्द हर जगह, बग़ैर ग़ुस्सा और तकरार के पाक हाथों को उठा कर दुआ किया करें।
ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.
9 इसी तरह 'औरतें हयादार लिबास से शर्म और परहेज़गारी के साथ अपने आपको सँवारें; न कि बाल गूँधने, और सोने और मोतियों और क़ीमती पोशाक से,
ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ
10 बल्कि नेक कामों से, जैसा ख़ुदा परस्ती का इक़रार करने वाली'औरतों को मुनासिब है।
೧೦ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
11 'औरत को चुपचाप कमाल ताबेदारी से सीखना चाहिए।
೧೧ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು.
12 और मैं इजाज़त नहीं देता कि'औरत सिखाए या मर्द पर हुक्म चलाए, बल्कि चुपचाप रहे।
೧೨ಉಪದೇಶಮಾಡುವುದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು.
13 क्यूँकि पहले आदम बनाया गया, उसके बाद हव्वा;
೧೩ಮೊದಲು ಸೃಷ್ಟಿಸಲ್ಪಟವನು ಆದಾಮನಲ್ಲವೇ, ಆಮೇಲೆ ಹವ್ವಳು.
14 और आदम ने धोखा नहीं खाया, बल्कि'औरत धोखा खाकर गुनाह में पड़ गई;
೧೪ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು.
15 लेकिन औलाद होने से नजात पाएगी, बशर्ते कि वो ईमान और मुहब्बत और पाकीज़गी में परहेज़गारी के साथ क़ाईम रहें।
೧೫ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.

< 1 तीमुथियुस 2 >