< 2 थिस्सलुनीकियों 1 >

1 पौलुस, और सिलास और तीमुथियुस की तरफ़ से थिस्सलुनीकियों शहर की कलीसिया के नाम ख़त जो हमारे बाप ख़ुदा और ख़ुदावन्द 'ईसा मसीह में है।
ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ಮತ್ತು ತಿಮೊಥೆ ಎಂಬ ನಾವು ಬರೆಯುವುದೇನಂದರೆ,
2 फ़ज़ल और इत्मीनान ख़ुदा' बाप और ख़ुदावन्द 'ईसा मसीह की तरफ़ से तुम्हें हासिल होता रहे।
ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
3 ऐ भाइयों! तुम्हारे बारे में हर वक़्त ख़ुदा का शुक्र करना हम पर फ़र्ज़ है, और ये इसलिए मुनासिब है, कि तुम्हारा ईमान बहुत बढ़ता जाता है; और तुम सब की मुहब्बत आपस में ज़्यादा होती जाती है।
ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.
4 यहाँ तक कि हम आप ख़ुदा की कलीसियाओं में तुम पर फ़ख़्र करते हैं कि जितने ज़ुल्म और मुसीबतें तुम उठाते हो उन सब में तुम्हारा सब्र और ईमान ज़ाहिर होता है।
ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮಿತ್ತ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ.
5 ये ख़ुदा की सच्ची अदालत का साफ़ निशान है; ताकि तुम ख़ुदा की बादशाही के लायक़ ठहरो जिस के लिए तुम तकलीफ़ भी उठाते हो।
ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.
6 क्यूँकि ख़ुदा के नज़दीक ये इन्साफ़ है के बदले में तुम पर मुसीबत लाने वालों को मुसीबत।
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.
7 और तुम मुसीबत उठाने वालों को हमारे साथ आराम दे; जब ख़ुदावन्द 'ईसा अपने मज़बूत फ़रिश्तों के साथ भड़कती हुई आग में आसमान से ज़ाहिर होगा।
ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.
8 और जो ख़ुदा को नहीं पहचानते और हमारे ख़ुदावन्द 'ईसा की ख़ुशख़बरी को नहीं मानते उन से बदला लेगा।
ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.
9 वह ख़ुदावन्द का चेहरा और उसकी क़ुदरत के जलाल से दूर हो कर हमेशा हलाकत की सज़ा पाएँगे (aiōnios g166)
ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು. (aiōnios g166)
10 ये उस दिन होगा जबकि वो अपने मुक़द्दसों में जलाल पाने और सब ईमान लाने वालों की वजह से ता'अज्जुब का बाइस होने के लिए आएगा; क्यूँकि तुम हमारी गवाही पर ईमान लाए।
೧೦ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.
11 इसी वास्ते हम तुम्हारे लिए हर वक़्त दुआ भी करते रहते हैं कि हमारा ख़ुदा तुम्हें इस बुलावे के लायक़ जाने और नेकी की हर एक ख़्वाहिश और ईमान के हर एक काम को क़ुदरत से पूरा करे।
೧೧ಆದುದರಿಂದ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ.
12 ताकि हमारे ख़ुदा और ख़ुदावन्द 'ईसा मसीह के फ़ज़ल के मुवाफ़िक़ हमारे ख़ुदावन्द 'ईसा का नाम तुम में जलाल पाए और तुम उस में।
೧೨ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.

< 2 थिस्सलुनीकियों 1 >