< लूका 4 >

1 फिर ईसा रूह — उल — क़ुद्दूस से भरा हुआ यरदन से लौटा, और चालीस दिन तक रूह की हिदायत से वीराने में फिरता रहा;
ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ,
2 और शैतान उसे आज़माता रहा। उन दिनों में उसने कुछ न खाया, जब वो दिन पुरे हो गए तो उसे भूख लगी।
ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.
3 और शैतान ने उससे कहा, “अगर तू ख़ुदा का बेटा है तो इस पत्थर से कह कि रोटी बन जाए।”
ಆಗ ಸೈತಾನನು ಆತನಿಗೆ, “ನೀನು ದೇವರ ಮಗನಾಗಿದ್ದರೆ ಈ ಕಲ್ಲನ್ನು ರೊಟ್ಟಿಯಾಗುವಂತೆ ಅಪ್ಪಣೆ ಕೊಡು” ಎಂದು ಹೇಳಲು,
4 ईसा ने उसको जवाब दिया, “कलाम में लिखा है कि, आदमी सिर्फ़ रोटी ही से जीता न रहेगा।”
ಯೇಸು ಅವನಿಗೆ, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು.
5 और शैतान ने उसे ऊँचे पर ले जाकर दुनिया की सब सल्तनतें पल भर में दिखाईं।
ಬಳಿಕ ಸೈತಾನನು ಆತನನ್ನು ಎತ್ತರಕ್ಕೆ ಕರೆದುಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ,
6 और उससे कहा, “ये सारा इख़्तियार और उनकी शान — ओ — शौकत मैं तुझे दे दूँगा, क्यूँकि ये मेरे सुपुर्द है और जिसको चाहता हूँ देता हूँ।
“ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಡಲ್ಪಟ್ಟಿದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ;
7 पस अगर तू मेरे आगे सज्दा करे, तो ये सब तेरा होगा।”
ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವುದು” ಎಂದು ಆತನಿಗೆ ಹೇಳಿದನು.
8 ईसा ने जवाब में उससे कहा, “लिखा है कि, तू ख़ुदावन्द अपने ख़ुदा को सिज्दा कर और सिर्फ़ उसकी इबादत कर।”
ಅದಕ್ಕೆ ಯೇಸು, “‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು.
9 और वो उसे येरूशलेम में ले गया और हैकल के कंगूरे पर खड़ा करके उससे कहा, अगर तू ख़ुदा का बेटा है तो अपने आपको यहाँ से नीचे गिरा दे।
ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು.
10 क्यूँकि लिखा है कि, वो तेरे बारे में अपने फ़रिश्तों को हुक्म देगा कि तेरी हिफ़ाज़त करें।
೧೦‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು;
11 और ये भी कि वो तुझे हाथों पर उठा लेंगे, क़ाश की तेरे पाँव को पत्थर से ठेस लगे।
೧೧ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು.
12 ईसा ने जवाब में उससे कहा, “फ़रमाया गया है कि, तू ख़ुदावन्द अपने ख़ुदा की आज़माइश न कर।”
೧೨ಅದಕ್ಕೆ ಆತನು, “‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು.
13 जब इब्लीस तमाम आज़माइशें कर चूका तो कुछ अर्से के लिए उससे जुदा हुआ।
೧೩ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು.
14 फिर ईसा पाक रूह की क़ुव्वत से भरा हुआ गलील को लौटा और आसपास में उसकी शोहरत फैल गई।
೧೪ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
15 और वो उनके 'इबादतख़ानों में ता'लीम देता रहा और सब उसकी बड़ाई करते रहे।
೧೫ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.
16 और वो नासरत में आया जहाँ उसने परवरिश पाई थी और अपने दस्तूर के मुवाफ़िक़ सबत के दिन 'इबादतख़ाने में गया और पढ़ने को खड़ा हुआ।
೧೬ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.
17 और यसायाह नबी की किताब उसको दी गई, और किताब खोलकर उसने वो वर्क़ा खोला जहाँ ये लिखा था:
೧೭ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು,
18 “ख़ुदावन्द का रूह मुझ पर है, इसलिए कि उसने मुझे ग़रीबों को ख़ुशख़बरी देने के लिए मसह किया; उसने मुझे भेजा है क़ैदियों को रिहाई और अन्धों को बीनाई पाने की ख़बर सूनाऊँ, कुचले हुओं को आज़ाद करूँ।
೧೮“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
19 और ख़ुदावन्द के साल — ए — मक़बूल का ऐलान करूँ।”
೧೯ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.”
20 फिर वो किताब बन्द करके और ख़ादिम को वापस देकर बैठ गया; जितने 'इबादतख़ाने में थे सबकी आँखें उस पर लगी थीं।
೨೦ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ,
21 वो उनसे कहने लगा, “आज ये लिखा हुआ तुम्हारे सामने पूरा हुआ।”
೨೧ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ,
22 और सबने उस पर गवाही दी और उन पुर फ़ज़ल बातों पर जो उसके मुँह से निकली थी, ता'ज्जुब करके कहने लगे, “क्या ये यूसुफ़ का बेटा नहीं?”
೨೨ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
23 उसने उनसे कहा “तुम अलबत्ता ये मिसाल मुझ पर कहोगे कि, 'ऐ हकीम, अपने आप को तो अच्छा कर! जो कुछ हम ने सुना है कि कफ़रनहूम में किया गया, यहाँ अपने वतन में भी कर'।”
೨೩ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.
24 और उसने कहा, “मैं तुम से सच कहता हूँ, कि कोई नबी अपने वतन में मक़बूल नहीं होता।
೨೪ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
25 और मैं तुम से कहता हूँ, कि एलियाह के दिनों में जब साढ़े तीन बरस आसमान बन्द रहा, यहाँ तक कि सारे मुल्क में सख़्त काल पड़ा, बहुत सी बेवाएँ इस्राईल में थीं।
೨೫ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;
26 लेकिन एलियाह उनमें से किसी के पास न भेजा गया, मगर मुल्क — ए — सैदा के शहर सारपत में एक बेवा के पास
೨೬ಆದರೆ ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ, ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು.
27 और इलिशा नबी के वक़्त में इस्राईल के बीच बहुत से कौढ़ी थे, लेकिन उनमें से कोई पाक साफ़ न किया गया मगर ना'मान सूरयानी।”
೨೭ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.
28 जितने 'इबादतख़ाने में थे, इन बातों को सुनते ही ग़ुस्से से भर गए,
೨೮ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು,
29 और उठकर उस को बाहर निकाले और उस पहाड़ की चोटी पर ले गए जिस पर उनका शहर आबाद था, ताकि उसको सिर के बल गिरा दें।
೨೯ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.
30 मगर वो उनके बीच में से निकलकर चला गया।
೩೦ಆದರೆ ಆತನು ಅವರ ಮಧ್ಯದಿಂದ ನಡೆದು ತನ್ನ ಪಾಡಿಗೆ ತಾನು ಹೊರಟು ಹೋದನು.
31 फिर वो गलील के शहर कफ़रनहूम को गया और सबत के दिन उन्हें ता'लीम दे रहा था।
೩೧ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು,
32 और लोग उसकी ता'लीम से हैरान थे क्यूँकि उसका कलाम इख़्तियार के साथ था।
೩೨ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.
33 इबादतख़ाने में एक आदमी था, जिसमें बदरूह थी। वो बड़ी आवाज़ से चिल्ला उठा कि,
೩೩ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು.
34 “ऐ ईसा नासरी हमें तुझ से क्या काम? क्या तू हमें हलाक करने आया है? मैं तुझे जानता हूँ कि तू कौन है — ख़ुदा का क़ुद्दूस है।”
೩೪
35 ईसा ने उसे झिड़क कर कहा, “चुप रह और उसमें से निकल जा।” इस पर बदरूह उसे बीच में पटक कर बग़ैर नुक़्सान पहूँचाए उसमें से निकल गई।
೩೫ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.
36 और सब हैरान होकर आपस में कहने लगे, “ये कैसा कलाम है? क्यूँकि वो इख़्तियार और क़ुदरत से नापाक रूहों को हुक्म देता है और वो निकल जाती हैं।”
೩೬ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
37 और आस पास में हर जगह उसकी धूम मच गई।
೩೭ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹರಡಿತು.
38 फिर वो 'इबादतख़ाने से उठकर शमौन के घर में दाख़िल हुआ और शमौन की सास जो बुख़ार में पड़ी हुई थी और उन्होंने उस के लिए उससे 'अर्ज़ की।
೩೮ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು.
39 वो खड़ा होकर उसकी तरफ़ झुका और बुख़ार को झिड़का तो वो उतर गया, वो उसी दम उठकर उनकी ख़िदमत करने लगी।
೩೯ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.
40 और सूरज के डूबते वक़्त वो सब लोग जिनके यहाँ तरह — तरह की बीमारियों के मरीज़ थे, उन्हें उसके पास लाए और उसने उनमें से हर एक पर हाथ रख कर उन्हें अच्छा किया।
೪೦ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.
41 और बदरूहें भी चिल्लाकर और ये कहकर कि, “तू ख़ुदा का बेटा है” बहुतों में से निकल गई, और वो उन्हें झिड़कता और बोलने न देता था, क्यूँकि वो जानती थीं के ये मसीह है।
೪೧ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.
42 जब दिन हुआ तो वो निकल कर एक वीरान जगह में गया, और भीड़ की भीड़ उसको ढूँडती हुई उसके पास आई, और उसको रोकने लगी कि हमारे पास से न जा।
೪೨ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು.
43 उसने उनसे कहा, “मुझे और शहरों में भी ख़ुदा की बादशाही की ख़ुशख़बरी सुनाना ज़रूर है, क्यूँकि मैं इसी लिए भेजा गया हूँ।”
೪೩ಆದರೆ ಆತನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು.
44 और वो गलील के 'इबाद्तखानों में एलान करता रहा।
೪೪ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.

< लूका 4 >