< मरकुस 16 >

1 जब सबत का दिन गुज़र गया तो मरियम मग़दलिनी और या'क़ूब की माँ मरियम और सलोमी ने ख़ुशबूदार चीज़ें मोल लीं ताकि आकर उस पर मलें।
ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.
2 वो हफ़्ते के पहले दिन बहुत सवेरे जब सूरज निकला ही था क़ब्र पर आईं।
ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.
3 और आपस में कहती थी “हमारे लिए पत्थर को क़ब्र के मुँह पर से कौन लुढ़काएगा?”
“ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
4 जब उन्हों ने निगाह की तो देखा कि पत्थर लुढ़का हुआ है क्यूँकि वो बहुत ही बड़ा था।
ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು.
5 क़ब्र के अन्दर जाकर उन्हों ने एक जवान को सफ़ेद जामा पहने हुए दहनी तरफ़ बैठे देखा और निहायत हैरान हुईं।
ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.
6 उसने उनसे कहा ऐसी हैरान न हो तुम ईसा नासरी को “जो मस्लूब हुआ था तलाश रही हो; जी उठा है वो यहाँ नहीं है देखो ये वो जगह है जहाँ उन्होंने उसे रख्खा था।
ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,
7 लेकिन तुम जाकर उसके शागिर्दों और पतरस से कहो कि वो तुम से पहले गलील को जाएगा तुम वहीं उसको देखोगे जैसा उसने तुम से कहा।”
ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.
8 और वो निकल कर क़ब्र से भागीं क्यूँकि कपकपी और हैबत उन पर ग़ालिब आ गई थी और उन्होंने किसी से कुछ न कहा क्यूँकि वो डरती थीं।
ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
9 (note: The most reliable and earliest manuscripts do not include Mark 16:9-20.) हफ़्ते के पहले दिन जब वो सवेरे जी उठा तो पहले मरियम मग़दलिनी को जिस में से उसने सात बदरूहें निकाली थीं दिखाई दिया।
(note: The most reliable and earliest manuscripts do not include Mark 16:9-20.) ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.
10 उसने जाकर उसके शागिर्दो को जो मातम करते और रोते थे ख़बर दी।
೧೦ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು.
11 उन्होंने ये सुनकर कि वो जी उठा है और उसने उसे देखा है यक़ीन न किया।
೧೧“ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ.
12 इसके बाद वो दूसरी सूरत में उन में से दो को जब वो देहात की तरफ़ जा रहे थे दिखाई दिया।
೧೨ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.
13 उन्होंने भी जाकर बाक़ी लोगों को ख़बर दी; मगर उन्होंने उन का भी यक़ीन न किया।
೧೩ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ.
14 फिर वो उन गयारह शागिर्दों को भी जब खाना खाने बैठे थे दिखाई दिया और उसने उनकी बे'ऐ'तिक़ादी और सख़्त दिली पर उनको मलामत की क्यूँकि जिन्हों ने उसके जी उठने के बाद उसे देखा था उन्होंने उसका यक़ीन न किया था।
೧೪ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.
15 और उसने उनसे कहा, “तुम सारी दुनियाँ में जाकर सारी मख़लूक़ के सामने इन्जील की मनादी करो।
೧೫ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
16 जो ईमान लाए और बपतिस्मा ले वो नजात पाएगा और जो ईमान न लाए वो मुजरिम ठहराया जाएगा।
೧೬ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
17 और ईमान लाने वालों के दर्मियान ये मोजिज़े होंगे वो मेरे नाम से बदरूहों को निकालेंगे; नई नई ज़बाने बोलेंगे।
೧೭“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;
18 साँपों को उठा लेंगे और अगर कोई हलाक करने वाली चीज़ पीएँगे तो उन्हें कुछ तकलीफ़ न पहुँचेगी वो बीमारों पर हाथ रखेंगे तो अच्छे हो जाएँगे।”
೧೮ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.
19 ग़रज़ ख़ुदावन्द उनसे कलाम करने के बाद आसमान पर उठाया गया और ख़ुदा की दहनी तरफ़ बैठ गया।
೧೯ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
20 फिर उन्होंने निकल कर हर जगह मनादी की और ख़ुदावन्द उनके साथ काम करता रहा और कलाम को उन मोजिज़ों के वसीले से जो साथ साथ होते थे साबित करता रहा; आमीन।
೨೦ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.

< मरकुस 16 >