< मत्ती 16 >

1 फिर फ़रीसियों और सदूक़ियों ने 'ईसा के पास आकर आज़माने के लिए उससे दरख़्वास्त की; कि हमें कोई आसमानी निशान दिखा।
ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.
2 उसने जवाब में उनसे कहा “शाम को तुम कहते हो, खुला रहेगा, क्यूँकि आसमान लाल है
ಆತನು ಅವರಿಗೆ, “‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ.
3 और सुबह को ये कि आज आन्धी चलेगी क्यूँकि आसमान लाल धुन्धला है तुम आसमान की सूरत में तो पहचान करना जानते हो मगर ज़मानो की अलामतों में पहचान नहीं कर सकते।
ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?
4 इस ज़माने के बुरे और बे'ईमान लोग निशान तलब करते हैं; मगर यहून्ना के निशान के सिवा कोई और निशान उनको न दिया जाएगा।” और वो उनको छोड़ कर चला गया।
ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.
5 शागिर्द पार जाते वक़्त रोटी साथ लेना भूल गए थे।
ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.
6 ईसा ने उन से कहा, “ख़बरदार, फ़रीसियों और सदूक़ियों के ख़मीर से होशियार रहना।”
ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.
7 वो आपस में चर्चा करने लगे, “हम रोटी नहीं लाए।”
ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
8 ईसा ने ये मालूम करके कहा, “ऐ कम — ऐ'तिक़ादों तुम आपस में क्यूँ चर्चा करते हो कि हमारे पास रोटी नहीं?
ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?
9 क्या अब तक नहीं समझते और उन पाँच हज़ार आदमियों की पाँच रोटियाँ तुम को याद नहीं? और न ये कि कितनी टोकरियाँ उठाईं?
ಆ ಐದು ರೊಟ್ಟಿಗಳನ್ನುಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?
10 और न उन चार हज़ार आदमियों की सात रोटियाँ? और न ये कि कितने टोकरे उठाए।
೧೦ಇಲ್ಲವೆ ಆಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?
11 क्या वजह है कि तुम ये नहीं समझते कि मैंने तुम से रोटी के बारे में नहीं कहा फ़रीसियों और सदूक़ियों के ख़मीर से होशियार रहो।”
೧೧ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.
12 जब उनकी समझ में न आया कि उसने रोटी के ख़मीर से नहीं; बल्कि फ़रीसियों और सदूक़ियों की ता'लीम से ख़बरदार रहने को कहा था।
೧೨ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.
13 जब ईसा क़ैसरिया फ़िलप्पी के इलाक़े में आया तो उसने अपने शागिर्दों से ये पूछा, “लोग इब्न — ए — आदम को क्या कहते हैं?”
೧೩ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.
14 उन्होंने कहा, कुछ यूहन्ना बपतिस्मा देने वाला कहते हैं। “कुछ एलियाह और कुछ यरमियाह या नबियों में से कोई।”
೧೪ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು.
15 उसने उनसे कहा, “मगर तुम मुझे क्या कहते हो?”
೧೫ಆತನು ಅವರನ್ನು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?”
16 शमौन पतरस ने जवाब में कहा, “तू ज़िन्दा ख़ुदा का बेटा मसीह है।”
೧೬ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
17 ईसा ने जवाब में उससे कहा, “मुबारिक़ है तू शमौन बर — यहून्ना, क्यूँकि ये बात गोश्त और ख़ून ने नहीं, बल्कि मेरे बाप ने जो आसमान पर है; तुझ पर ज़ाहिर की है।
೧೭ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
18 और मैं भी तुम से कहता हूँ; कि तू पतरस है; और मैं इस पत्थर पर अपनी कलीसिया बनाऊँगा। और आलम — ए — अरवाह के दरवाज़े उस पर ग़ालिब न आएँगे। (Hadēs g86)
೧೮ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನುಪೇತ್ರನು, ಈಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು. (Hadēs g86)
19 मैं आसमान की बादशाही की कुन्जियाँ तुझे दूँगा; और जो कुछ तू ज़मीन पर बाँधे गा वो आसमान पर बाँधेगा और जो कुछ तू ज़मीन पर खोले गा वो आसमान पर खुलेगा।”
೧೯ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.
20 उस वक़्त उसने शागिर्दों को हुक्म दिया कि किसी को न बताना कि मैं मसीह हूँ।
೨೦ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
21 उस वक़्त से ईसा अपने शागिर्दों पर ज़ाहिर करने लगा “कि उसे ज़रूर है कि येरूशलेम को जाए और बुज़ुर्गों और सरदार काहिनों और आलिमों की तरफ़ से बहुत दु: ख उठाए; और क़त्ल किया जाए और तीसरे दिन जी उठे।”
೨೧ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
22 इस पर पतरस उसको अलग ले जाकर मलामत करने लगा “ऐ ख़ुदावन्द, ख़ुदा न करे ये तुझ पर हरगिज़ नहीं आने का।”
೨೨ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.
23 उसने फिर कर पतरस से कहा, “ऐ शैतान, मेरे सामने से दूर हो! तू मेरे लिए ठोकर का बा'इस है; क्यूँकि तू ख़ुदा की बातों का नहीं बल्कि आदमियों की बातों का ख़याल रखता है।”
೨೩ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.
24 उस वक़्त ईसा ने अपने शागिर्दों से कहा, “अगर कोई मेरे पीछे आना चाहे तो अपने आपका इन्कार करे; अपनी सलीब उठाए और मेरे पीछे हो ले।
೨೪ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
25 क्यूँकि जो कोई अपनी जान बचाना चाहे उसे खोएगा; और जो कोई मेरी ख़ातिर अपनी जान खोएगा उसे पाएगा।
೨೫ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
26 अगर आदमी सारी दुनिया हासिल करे और अपनी जान का नुक़्सान उठाए तो उसे क्या फ़ाइदा होगा?
೨೬ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
27 क्यूँकि इब्न — ए — आदम अपने बाप के जलाल में अपने फ़रिश्तों के साथ आएगा; उस वक़्त हर एक को उसके कामों के मुताबिक़ बदला देगा।
೨೭ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
28 मैं तुम से सच कहता हूँ कि जो यहाँ खड़े हैं उन में से कुछ ऐसे हैं कि जब तक इब्न — ए — आदम को उसकी बादशाही में आते हुए न देख लेंगे; मौत का मज़ा हरगिज़ न चखेंगे।”
೨೮“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.

< मत्ती 16 >