< मत्ती 24 >

1 और ईसा हैकल से निकल कर जा रहा था, कि उसके शागिर्द उसके पास आए, ताकि उसे हैकल की इमारतें दिखाएँ।
ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.
2 उसने जवाब में उनसे कहा, “क्या तुम इन सब चीज़ों को नहीं देखते? मैं तुम से सच कहता हूँ, कि यहाँ किसी पत्थर पर पत्थर बाक़ी न रहेगा; जो गिराया न जाएगा।”
ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.
3 जब वो ज़ैतून के पहाड़ पर बैठा था, उसके शागिर्दों ने अलग उसके पास आकर कहा, “हम को बता ये बातें कब होंगी? और तेरे आने और दुनिया के आख़िर होने का निशान क्या होगा?” (aiōn g165)
ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು (aiōn g165)
4 ईसा' ने जवाब में उनसे कहा, “ख़बरदार! कोई तुम को गुमराह न कर दे,
ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.
5 क्यूँकि बहुत से मेरे नाम से आएँगे और कहेंगे, ‘मैं मसीह हूँ।’ और बहुत से लोगों को गुमराह करेंगे।
ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
6 और तुम लड़ाइयाँ और लड़ाइयों की अफ़वाह सुनोगे, ख़बरदार, घबरा न जाना, क्यूँकि इन बातों का वाक़े होना ज़रूर है।
ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
7 क्यूँकि क़ौम पर क़ौम और सल्तनत पर सल्तनत चढ़ाई करेगी, और जगह — जगह काल पड़ेंगे, और भुन्चाल आएँगे।
ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;
8 लेकिन ये सब बातें मुसीबतों का शुरू ही होंगी।
ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ.
9 उस वक़्त लोग तुम को तकलीफ़ देने के लिए पकड़वाएँगे, और तुम को क़त्ल करेंगे; और मेरे नाम की ख़ातिर सब क़ौमें तुम से दुश्मनी रख्खेंगी।
“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.
10 और उस वक़्त बहुत से ठोकर खाएँगे, और एक दूसरे को पकड़वाएँगे; और एक दूसरे से दुश्मनी रख्खेंगे।
೧೦ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.
11 और बहुत से झूठे नबी उठ खड़े होंगे, और बहुतों को गुमराह करेंगे।
೧೧ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.
12 और बेदीनी के बढ़ जाने से बहुतेरों की मुहब्बत ठन्डी पड़ जाएगी।
೧೨ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು.
13 लेकिन जो आख़िर तक बर्दाश्त करेगा वो नजात पाएगा।
೧೩ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.
14 और बादशाही की इस ख़ुशख़बरी का एलान तमाम दुनिया में होगा, ताकि सब क़ौमों के लिए गवाही हो, तब ख़ातिमा होगा।”
೧೪ಇದಲ್ಲದೆರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.
15 “पस जब तुम उस उजाड़ने वाली मकरूह चीज़ जिसका ज़िक्र दानीएल नबी की ज़रिए हुआ, मुक़द्दस मुक़ामों में खड़ा हुआ देखो (पढ़ने वाले समझ लें)
೧೫“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)
16 तो जो यहूदिया में हों वो पहाड़ों पर भाग जाएँ।
೧೬ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ;
17 जो छत पर हो वो अपने घर का माल लेने को नीचे न उतरे।
೧೭ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ,
18 और जो खेत में हो वो अपना कपड़ा लेने को पीछे न लौटे।”
೧೮ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ.
19 “मगर अफ़सोस उन पर जो उन दिनों में हामिला हों और जो दूध पिलाती हों।
೧೯ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ.
20 पस, दुआ करो कि तुम को जाड़ों में या सबत के दिन भागना न पड़े।
೨೦ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ.
21 क्यूँकि उस वक़्त ऐसी बड़ी मुसीबत होगी कि दुनिया के शुरू से न अब तक हुई न कभी होगी।
೨೧ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.
22 अगर वो दिन घटाए न जाते तो कोई बशर न बचता मगर चुने हुवों की ख़ातिर वो दिन घटाए जाएँगे।
೨೨ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.
23 उस वक़्त अगर कोई तुम को कहे, देखो, मसीह ‘यहाँ है’ या ‘वह वहाँ है’ तो यक़ीन न करना।”
೨೩ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ.
24 “क्यूँकि झूठे मसीह और झूठे नबी उठ खड़े होंगे और ऐसे बड़े निशान और अजीब काम दिखाएँगे कि अगर मुम्किन हो तो बरगुज़ीदों को भी गुमराह कर लें।
೨೪ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
25 देखो, मैं ने पहले ही तुम को कह दिया है।
೨೫ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.
26 पस अगर वो तुम से कहें, देखो, वो वीरानों में है तो बाहर न जाना। या देखो, कोठरियों में है तो यक़ीन न करना।”
೨೬ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.
27 “क्यूँकि जैसे बिजली पूरब से कौंध कर पच्छिम तक दिखाई देती है वैसे ही इबने आदम का आना होगा।
೨೭ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.
28 जहाँ मुर्दार है, वहाँ गिद्ध जमा हो जाएँगे।”
೨೮ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.
29 “फ़ौरन इन दिनों की मुसीबत के बाद सूरज तारीक हो जाएगा। और चाँद अपनी रौशनी न देगा, और सितारे आसमान से गिरेंगे और आस्मान की क़ुव्वतें हिलाई जाएँगी।
೨೯“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.
30 और उस वक़्त इब्न — ए — आदम का निशान आस्मान पर दिखाई देगा। और उस वक़्त ज़मीन की सब क़ौमें छाती पीटेंगी; और इबने आदम को बड़ी क़ुदरत और जलाल के साथ आसमान के बादलों पर आते देखेंगी।
೩೦ಆಗಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.
31 और वो नरसिंगे की बड़ी आवाज़ के साथ अपने फ़रिश्तों को भेजेगा और वो उसके चुने हुवों को चारों तरफ़ से आसमान के इस किनारे से उस किनारे तक जमा करेंगे।”
೩೧ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
32 “अब अंजीर के दरख़्त से एक मिसाल सीखो, जैसे ही उसकी डाली नर्म होती और पत्ते निकलते हैं तुम जान लेते हो कि गर्मी नज़दीक है।
೩೨“ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.
33 इसी तरह जब तुम इन सब बातों को देखो, तो जान लो कि वो नज़दीक बल्कि दरवाज़े पर है।
೩೩ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.
34 मैं तुम से सच कहता हूँ कि जब तक ये सब बातें न हो लें ये नस्ल हरगिज़ तमाम न होगी।
೩೪ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
35 आसमान और ज़मीन टल जाएँगी लेकिन मेरी बातें हरगिज़ न टलेंगी।”
೩೫ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
36 “लेकिन उस दिन और उस वक़्त के बारे में कोई नहीं जानता, न आसमान के फ़रिश्ते न बेटा मगर, सिर्फ़ बाप।
೩೬“ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,
37 जैसा नूह के दिनों में हुआ वैसा ही इबने आदम के आने के वक़्त होगा।
೩೭ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು.
38 क्यूँकि जिस तरह तूफ़ान से पहले के दिनों में लोग खाते पीते और ब्याह शादी करते थे, उस दिन तक कि नूह नाव में दाख़िल हुआ।
೩೮ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.
39 और जब तक तूफ़ान आकर उन सब को बहा न ले गया, उन को ख़बर न हुई, उसी तरह इबने आदम का आना होगा।
೩೯ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.
40 उस वक़्त दो आदमी खेत में होंगे, एक ले लिया जाएगा, और दूसरा छोड़ दिया जाएगा,
೪೦ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು.
41 दो औरतें चक्की पीसती होंगी, एक ले ली जाएगी और दूसरी छोड़ दी जाएगी।
೪೧ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು.
42 पस जागते रहो, क्यूँकि तुम नहीं जानते कि तुम्हारा ख़ुदावन्द किस दिन आएगा
೪೨“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.
43 लेकिन ये जान रख्खो, कि अगर घर के मालिक को मा'लूम होता कि चोर रात के कौन से पहर आएगा, तो जागता रहता और अपने घर में नक़ब न लगाने देता।
೪೩ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.
44 इसलिए तुम भी तैयार रहो, क्यूँकि जिस घड़ी तुम को गुमान भी न होगा इबने आदम आ जाएगा।”
೪೪ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
45 “पस वो ईमानदार और अक़्लमन्द नौकर कौन सा है, जिसे मालिक ने अपने नौकर चाकरों पर मुक़र्रर किया ताकि वक़्त पर उनको खाना दे।
೪೫ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?
46 मुबारिक़ है वो नौकर जिसे उस का मालिक आकर ऐसा ही करते पाए।
೪೬ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು.
47 मैं तुम से सच कहता हूँ, कि वो उसे अपने सारे माल का मुख़्तार कर देगा।
೪೭ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
48 लेकिन अगर वो ख़राब नौकर अपने दिल में ये कह कर कि मेरे मालिक के आने में देर है।
೪೮ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು
49 अपने हमख़िदमतों को मारना शुरू करे, और शराबियों के साथ खाए पिए।
೪೯ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ,
50 तो उस नौकर का मालिक ऐसे दिन कि वो उसकी राह न देखता हो और ऐसी घड़ी कि वो न जानता हो आ मौजूद होगा।
೫೦ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ
51 और ख़ूब कोड़े लगा कर उसको रियाकारों में शामिल करेगा वहाँ रोना और दाँत पीसना होगा।”
೫೧ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

< मत्ती 24 >