< मत्ती 27 >

1 जब सुबह हुई तो सब सरदार काहिनों और क़ौम के बुज़ुर्गों ने ईसा के ख़िलाफ़ मशवरा किया कि उसे मार डालें।
ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,
2 और उसे बाँध कर ले गए, और पीलातुस हाकिम के हवाले किया।
ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.
3 जब उसके पकड़वाने वाले यहूदाह ने ये देखा, कि वो मुजरिम ठहराया गया, तो अफ़्सोस किया और वो तीस रुपऐ सरदार काहिन और बुज़ुर्गों के पास वापस लाकर कहा।
ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.
4 “मैंने गुनाह किया, कि बेक़ुसूर को क़त्ल के लिए पकड़वाया।” उन्हों ने कहा “हमें क्या! तू जान।”
“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.
5 वो रुपऐऊँ को मक़दिस में फेंक कर चला गया। और जाकर अपने आपको फाँसी दी।
ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.
6 सरदार काहिन ने रुपऐ लेकर कहा “इनको हैकल के ख़ज़ाने में डालना जायज़ नहीं; क्यूँकि ये ख़ून की क़ीमत है।”
ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.
7 पस उन्होंने मशवरा करके उन रुपऐऊँ से कुम्हार का खेत परदेसियों के दफ़्न करने के लिए ख़रीदा।
ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.
8 इस वजह से वो खेत आज तक ख़ून का खेत कहलाता है।
ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ.
9 उस वक़्त वो पूरा हुआ जो यरमियाह नबी के ज़रिए कहा गया था कि जिसकी क़ीमत ठहराई गई थी, “उन्होंने उसकी क़ीमत के वो तीस रुपऐ ले लिए, (उसकी क़ीमत कुछ बनी इस्राईल ने ठहराई थी)
ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ
10 और उसको कुम्हार के खेत के लिए दिया, जैसा ख़ुदावन्द ने मुझे हुक्म दिया।”
೧೦ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು.
11 ईसा हाकिम के सामने खड़ा था, और हाकिम ने उससे पूछा, क्या तू यहूदियों का बादशाह है? ईसा ने उस से कहा, “तू ख़ुद कहता है।”
೧೧ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.
12 जब सरदार काहिन और बुज़ुर्ग उस पर इल्ज़ाम लगा रहे थे, उसने कुछ जवाब न दिया।
೧೨ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ,
13 इस पर पीलातुस ने उस से कहा “क्या तू नहीं सुनता, ये तेरे ख़िलाफ़ कितनी गवाहियाँ देते हैं?”
೧೩ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು.
14 उसने एक बात का भी उसको जवाब न दिया, यहाँ तक कि हाकिम ने बहुत ता'ज्जुब किया।
೧೪ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.
15 और हाकिम का दस्तूर था, कि ईद पर लोगों की ख़ातिर एक क़ैदी जिसे वो चाहते थे छोड़ देता था।
೧೫ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.
16 उस वक़्त बरअब्बा नाम उन का एक मशहूर क़ैदी था।
೧೬ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು.
17 पस जब वो इकटठे हुए तो पीलातुस ने उस से कहा, “तुम किसे चाहते हो कि तुम्हारी ख़ातिर छोड़ दूँ? बरअब्बा को या ईसा को जो मसीह कहलाता है?”
೧೭ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು.
18 क्यूँकि उसे मा'लूम था, कि उन्होंने उसको जलन से पकड़वाया है।
೧೮ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.
19 और जब वो तख़्त — ए आदालत पर बैठा था तो उस की बीवी ने उसे कहला भेजा “तू इस रास्तबाज़ से कुछ काम न रख क्यूँकि मैंने आज ख़्वाब में इस की वजह से बहुत दु: ख उठाया है।”
೧೯ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.
20 लेकिन सरदार काहिनों और बुज़ुर्गों ने लोगों को उभारा कि बरअब्बा को माँग लें, और ईसा को हलाक कराएँ।
೨೦ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.
21 हाकिम ने उनसे कहा इन दोनों में से किसको चाहते हो कि तुम्हारी ख़ातिर छोड़ दूँ? उन्होंने कहा “बरअब्बा को।”
೨೧ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು.
22 पीलातुस ने उनसे कहा “फिर ईसा को जो मसीह कहलाता है क्या करूँ?” सब ने कहा “वो मस्लूब हो।”
೨೨ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.
23 उसने कहा “क्यूँ? उस ने क्या बुराई की है?” मगर वो और भी चिल्ला — चिल्ला कर कहने लगे “वो मस्लूब हो!”
೨೩ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.
24 जब पीलातुस ने देखा कि कुछ बन नहीं पड़ता बल्कि उल्टा बलवा होता जाता है तो पानी लेकर लोगों के रूबरू अपने हाथ धोए “और कहा, मैं इस रास्तबाज़ के ख़ून से बरी हूँ; तुम जानो।”
೨೪ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು
25 सब लोगों ने जवाब में कहा “इसका ख़ून हमारी और हमारी औलाद की गर्दन पर।”
೨೫ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.
26 इस पर उस ने बरअब्बा को उनकी ख़ातिर छोड़ दिया, और ईसा को कोड़े लगवा कर हवाले किया कि मस्लूब हो।
೨೬ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
27 इस पर हाकिम के सिपाहियों ने ईसा को क़िले में ले जाकर सारी पलटन उसके आस पास जमा की।
೨೭ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,
28 और उसके कपड़े उतार कर उसे क़िरमिज़ी चोग़ा पहनाया।
೨೮ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ,
29 और काँटों का ताज बना कर उसके सिर पर रख्खा, और एक सरकंडा उस के दहने हाथ में दिया और उसके आगे घुटने टेक कर उसे ठठ्ठों में उड़ाने लगे; “ऐ यहूदियों के बादशाह, आदाब!”
೨೯ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ
30 और उस पर थूका, और वही सरकंडा लेकर उसके सिर पर मारने लगे।
೩೦ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.
31 और जब उसका ठठ्ठा कर चुके तो चोग़े को उस पर से उतार कर फिर उसी के कपड़े उसे पहनाए; और मस्लूब करने को ले गए।
೩೧ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
32 जब बाहर आए तो उन्होंने शमौन नाम एक कुरेनी आदमी को पाकर उसे बेग़ार में पकड़ा, कि उसकी सलीब उठाए।
೩೨ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.
33 और उस जगह जो गुल्गुता या'नी खोपड़ी की जगह कहलाती है पहुँचकर।
೩೩ಅವರೆಲ್ಲರೂ ಗೊಲ್ಗೊಥಾ ಅಂದರೆ “ಕಪಾಲಸ್ಥಳ” ಎಂಬ ಸ್ಥಾನಕ್ಕೆ ಬಂದಾಗ
34 पित मिली हुई मय उसे पीने को दी, मगर उसने चख कर पीना न चाहा।
೩೪ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.
35 और उन्होंने उसे मस्लूब किया; और उसके कपड़े पर्ची डाल कर बाँट लिए।
೩೫ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;
36 और वहाँ बैठ कर उसकी निगहबानी करने लगे।
೩೬ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು.
37 और उस का इल्ज़ाम लिख कर उसके सिर से ऊपर लगा दिया “कि ये यहूदियों का बादशाह ईसा है।”
೩೭ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.
38 उस वक़्त उसके साथ दो डाकू मस्लूब हुए, एक दहने और एक बाएँ।
೩೮ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.
39 और राह चलने वाले सिर हिला — हिला कर उसको ला'न ता'न करते और कहते थे।
೩೯ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ,
40 “ऐ मक़दिस के ढानेवाले और तीन दिन में बनाने वाले अपने आप को बचा; अगर तू ख़ुदा का बेटा है तो सलीब पर से उतर आ।”
೪೦“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.
41 इसी तरह सरदार काहिन भी फ़क़ीहों और बुज़ुर्गों के साथ मिलकर ठठ्ठे से कहते थे,
೪೧ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
42 “इसने औरों को बचाया, अपने आप को नहीं बचा सकता, ये तो इस्राईल का बादशाह है; अब सलीब पर से उतर आए, तो हम इस पर ईमान लाएँ।
೪೨ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.
43 इस ने ख़ुदा पर भरोसा किया है, अगरचे इसे चाहता है तो अब इस को छुड़ा ले, क्यूँकि इस ने कहा था, मैं ख़ुदा का बेटा हूँ।”
೪೩ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.
44 इसी तरह डाकू भी जो उसके साथ मस्लूब हुए थे, उस पर ला'न ता'न करते थे।
೪೪ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.
45 और दोपहर से लेकर तीसरे पहर तक तमाम मुल्क में अन्धेरा छाया रहा।
೪೫ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
46 और तीसरे पहर के क़रीब ईसा ने बड़ी आवाज़ से चिल्ला कर कहा “एली, एली, लमा शबक़तनी ऐ मेरे ख़ुदा, ऐ मेरे ख़ुदा, तू ने मुझे क्यूँ छोड़ दिया?”
೪೬ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.
47 जो वहाँ खड़े थे उन में से कुछ ने सुन कर कहा “ये एलियाह को पुकारता है।”
೪೭ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು.
48 और फ़ौरन उनमें से एक शख़्स दौड़ा और सोख़ते को लेकर सिरके में डुबोया और सरकंडे पर रख कर उसे चुसाया।
೪೮ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.
49 मगर बाक़ियों ने कहा, “ठहर जाओ, देखें तो एलियाह उसे बचाने आता है या नहीं।”
೪೯ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು.
50 ईसा ने फिर बड़ी आवाज़ से चिल्ला कर जान दे दी।
೫೦ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
51 और मक़दिस का पर्दा ऊपर से नीचे तक फट कर दो टुकड़े हो गया, और ज़मीन लरज़ी और चट्टानें तड़क गईं।
೫೧ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;
52 और क़ब्रें खुल गईं। और बहुत से जिस्म उन मुक़द्दसों के जो सो गए थे, जी उठे।
೫೨ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;
53 और उसके जी उठने के बाद क़ब्रों से निकल कर मुक़द्दस शहर में गए, और बहुतों को दिखाई दिए।
೫೩ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
54 पस सुबेदार और जो उस के साथ ईसा की निगहबानी करते थे, भुन्चाल और तमाम माजरा देख कर बहुत ही डर कर कहने लगे “बै — शक ये ख़ुदा का बेटा था।”
೫೪ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
55 और वहाँ बहुत सी औरतें जो गलील से ईसा की ख़िदमत करती हुई उसके पीछे — पीछे आई थी, दूर से देख रही थीं।
೫೫ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.
56 उन में मरियम मग़दलिनी थी, और या'क़ूब और योसेस की माँ मरियम और ज़ब्दी के बेटों की माँ।
೫೬ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.
57 जब शाम हुई तो यूसुफ़ नाम अरिमतियाह का एक दौलतमन्द आदमी आया जो ख़ुद भी ईसा का शागिर्द था।
೫೭ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.
58 उस ने पीलातुस के पास जा कर ईसा की लाश माँगी, इस पर पीलातुस ने दे देने का हुक्म दे दिया।
೫೮ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು.
59 यूसुफ़ ने लाश को लेकर साफ़ महीन चादर में लपेटा।
೫೯ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ
60 और अपनी नई क़ब्र में जो उस ने चट्टान में खुदवाई थी रख्खा, फिर वो एक बड़ा पत्थर क़ब्र के मुँह पर लुढ़का कर चला गया।
೬೦ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.
61 और मरियम मग़दलिनी और दूसरी मरियम वहाँ क़ब्र के सामने बैठी थीं।
೬೧ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.
62 दूसरे दिन जो तैयारी के बाद का दिन था, सरदार काहिन और फ़रीसियों ने पीलातुस के पास जमा होकर कहा।
೬೨ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,
63 ख़ुदावन्द हमें याद है “कि उस धोखेबाज़ ने जीते जी कहा था, मैं तीन दिन के बाद जी उठूँगा।
೬೩“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;
64 पस हुक्म दे कि तीसरे दिन तक क़ब्र की निगहबानी की जाए, कहीं ऐसा न हो कि उसके शागिर्द आकर उसे चुरा ले जाएँ, और लोगों से कह दें, वो मुर्दों में से जी उठा, और ये पिछला धोखा पहले से भी बुरा हो।”
೬೪ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.
65 पीलातुस ने उनसे कहा “तुम्हारे पास पहरे वाले हैं जाओ, जहाँ तक तुम से हो सके उसकी निगहबानी करो।”
೬೫ಪಿಲಾತನು ಅವರಿಗೆ, “ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ” ಎಂದು ಹೇಳಲು
66 पस वो पहरेदारों को साथ लेकर गए, और पत्थर पर मुहर करके क़ब्र की निगहबानी की।
೬೬ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.

< मत्ती 27 >