Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Hebrews Chapter 8 https://www.AionianBible.org/Bibles/Kannada---Kannada-Bible/Hebrews/8 1 ೧) ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ. 2 ೨) ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ. 3 ೩) ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ. 4 ೪) ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ. 5 ೫) ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. 6 ೬) ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. 7 ೭) ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ. 8 ೮) ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ. 9 ೯) ‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ. 10 ೧೦) ‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು. 11 ೧೧) ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. 12 ೧೨) ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’” ಎಂದು ಕರ್ತನು ನುಡಿಯುತ್ತಾನೆ. 13 ೧೩) ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ. Additional comments?
Refresh Captcha
The world's first Holy Bible un-translation!