Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Hosea Chapter 11 https://www.AionianBible.org/Bibles/Kannada---Kannada-Bible/Hosea/11 1 ೧) ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು. 2 ೨) ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು. 3 ೩) ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ. 4 ೪) ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು. 5 ೫) ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು. 6 ೬) ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು. 7 ೭) ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ. 8 ೮) ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು. 9 ೯) ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು. 10 ೧೦) ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು; 11 ೧೧) ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ. 12 ೧೨) ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ. Additional comments?
Refresh Captcha
The world's first Holy Bible un-translation!