Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 33 https://www.AionianBible.org/Bibles/Kannada---Kannada-Bible/Psalms/33 1 ೧) ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ. 2 ೨) ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ. 3 ೩) ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ. 4 ೪) ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. 5 ೫) ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. 6 ೬) ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು. 7 ೭) ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ. 8 ೮) ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ. 9 ೯) ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು. 10 ೧೦) ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ. 11 ೧೧) ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ. 12 ೧೨) ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು. 13 ೧೩) ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ; 14 ೧೪) ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ. 15 ೧೫) ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ. 16 ೧೬) ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ. 17 ೧೭) ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು. 18 ೧೮) ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. 19 ೧೯) ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು. 20 ೨೦) ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ. 21 ೨೧) ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ. 22 ೨೨) ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ. Additional comments?
Refresh Captcha
The world's first Holy Bible un-translation!