Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 9 https://www.AionianBible.org/Bibles/Kannada---Kannada-Bible/Psalms/9 1 ೧) ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. 2 ೨) ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು. 3 ೩) ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ. 4 ೪) ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ. 5 ೫) ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. 6 ೬) ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು. 7 ೭) ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. 8 ೮) ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು. 9 ೯) ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. 10 ೧೦) ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ. 11 ೧೧) ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. 12 ೧೨) ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು. 13 ೧೩) ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. 14 ೧೪) ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು. 15 ೧೫) ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. 16 ೧೬) ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ (ಸೆಲಾ) 17 ೧೭) ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. (Sheol h7585) 18 ೧೮) ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ. 19 ೧೯) ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. 20 ೨೦) ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. (ಸೆಲಾ) Additional comments?
Refresh Captcha
The world's first Holy Bible un-translation!