Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 96 https://www.AionianBible.org/Bibles/Kannada---Kannada-Bible/Psalms/96 1 ೧) ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ. 2 ೨) ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ. 3 ೩) ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ. 4 ೪) ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು. 5 ೫) ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು. 6 ೬) ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ. 7 ೭) ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ. 8 ೮) ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ. 9 ೯) ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ. 10 ೧೦) ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. 11 ೧೧) ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. 12 ೧೨) ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ. 13 ೧೩) ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು. Additional comments?
Refresh Captcha
The world's first Holy Bible un-translation!