Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kanada Open Contemporary Bible, Psalms Chapter 31 https://www.AionianBible.org/Bibles/Kannada---Open-Contemporary/Psalms/31 1) ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿಕೊಂಡಿದ್ದೇನೆ; ನಾನು ಎಂದಿಗೂ ನಾಚಿಕೆಪಡದಂತೆ ಮಾಡಿರಿ; ನಿಮ್ಮ ನೀತಿಯಲ್ಲಿ ನನ್ನನ್ನು ವಿಮೋಚಿಸಿರಿ. 2) ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ; ಬೇಗ ಬಂದು ನನ್ನನ್ನು ಬಿಡಿಸಿರಿ; ನನ್ನನ್ನು ರಕ್ಷಿಸುವುದಕ್ಕೆ ನನ್ನ ಆಶ್ರಯದ ಬಂಡೆಯೂ, ಬಲವಾದ ಕೋಟೆಯೂ ಆಗಿರಿ. 3) ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ; ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ನಡೆಸಿರಿ; ನನಗೆ ಮಾರ್ಗದರ್ಶಕರಾಗಿರಿ. 4) ವೈರಿಯು ಗುಪ್ತವಾಗಿ ಒಡ್ಡಿದ ಬಲೆಯೊಳಗಿಂದ ನನ್ನನ್ನು ಹೊರಗೆ ಎಳೆಯಿರಿ; ನೀವೇ ನನಗೆ ಆಶ್ರಯ. 5) ನಿಮ್ಮ ಕೈಗೆ ನನ್ನ ಆತ್ಮವನ್ನು ಒಪ್ಪಿಸಿದ್ದೇನೆ; ನಂಬಿಗಸ್ತದ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನನ್ನು ವಿಮೋಚಿಸಿದ್ದೀರಿ. 6) ದೇವರಲ್ಲದವುಗಳನ್ನು ಅನುಸರಿಸುವವರಿಂದ ನಾನು ಪ್ರತ್ಯೇಕವಾಗಿದ್ದೇನೆ; ನಾನು ಯೆಹೋವ ದೇವರಲ್ಲಿಯೇ ಭರವಸೆ ಇಟ್ಟಿದ್ದೇನೆ. 7) ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು; ಏಕೆಂದರೆ ನೀವು ನನ್ನ ಕಷ್ಟಗಳನ್ನು ಲಕ್ಷ್ಯಕ್ಕೆ ತಂದು, ನನ್ನ ಪ್ರಾಣದ ಸಂಕಟಗಳನ್ನು ಅರಿತಿದ್ದೀರಿ. 8) ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿ ಬಿಡಲಿಲ್ಲ; ನನ್ನ ಪಾದಗಳನ್ನು ವಿಶಾಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀರಿ. 9) ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ; ನನ್ನ ಕಣ್ಣೂ ನನ್ನ ಪ್ರಾಣವೂ ನನ್ನ ದೇಹವೂ ದುಃಖದಿಂದ ಕ್ಷೀಣವಾಗಿವೆ. 10) ನನ್ನ ಜೀವವು ಚಿಂತೆಯಿಂದಲೂ, ನನ್ನ ವರ್ಷಗಳು ನಿಟ್ಟುಸಿರಿನಿಂದಲೂ ಕಳೆದುಹೋಗಿವೆ; ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಕ್ಷೀಣವಾಗಿವೆ. 11) ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ. 12) ನಾನು ಸತ್ತುಹೋದವರಂತೆ ಎಲ್ಲರು ನನ್ನನ್ನು ಮರೆತುಬಿಟ್ಟಿದ್ದಾರೆ; ನಾನು ಒಡೆದ ಮಡಕೆಯಂತೆ ಇದ್ದೇನೆ. 13) ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ. 14) ಯೆಹೋವ ದೇವರೇ, ನಾನು ನಿಮ್ಮಲ್ಲಿ ಭರವಸೆ ಇಟ್ಟಿದ್ದೇನೆ; “ನನ್ನ ದೇವರು ನೀವೇ,” ಎಂದು ಹೇಳಿಕೊಂಡಿದ್ದೇನೆ. 15) ನನ್ನ ಸಮಯವು ನಿಮ್ಮ ಕೈಯಲ್ಲಿ ಇವೆ; ನನ್ನ ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸಿರಿ. 16) ನಿಮ್ಮ ಮುಖವು ನಿಮ್ಮ ಸೇವಕನ ಮೇಲೆ ಪ್ರಕಾಶಿಸಲಿ; ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನನ್ನನ್ನು ರಕ್ಷಿಸಿರಿ. 17) ಯೆಹೋವ ದೇವರೇ, ನಾನು ನಾಚಿಕೆಪಡದಂತೆ ಮಾಡಿರಿ; ನಾನು ನಿಮಗೆ ಮೊರೆಯಿಟ್ಟಿದ್ದೇನೆ; ದುಷ್ಟರು ನಾಚಿಕೆಪಡಲಿ; ಅವರು ಸಮಾಧಿ ಸೇರಲಿ. (Sheol h7585) 18) ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ. 19) ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ; ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ, ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ. 20) ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ. 21) ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; ಮುತ್ತಿಗೆ ಹಾಕಲಾದ ನಗರದಲ್ಲಿದ್ದ ನನಗೆ ದೇವರು ಆಶ್ಚರ್ಯಕರವಾದ ಒಡಂಬಡಿಕೆಯ ಪ್ರೀತಿಯನ್ನು ತೋರಿಸಿದ್ದಾರೆ. 22) “ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ. 23) ಭಕ್ತರೇ, ಯೆಹೋವ ದೇವರನ್ನು ಪ್ರೀತಿಸಿರಿ; ಯೆಹೋವ ದೇವರು ನಂಬಿಗಸ್ತರನ್ನು ಕಾಯುತ್ತಾರೆ; ಅಹಂಕಾರಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. 24) ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ; ನಿಮ್ಮ ಹೃದಯವು ಧೈರ್ಯದಿಂದ ಇರಲಿ. Additional comments?
Refresh Captcha
The world's first Holy Bible un-translation!